ವನ್ಯಜೀವಿ ಸಪ್ತಾಹ ಅಂಗವಾಗಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ 70ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತುಮಕೂರಿನಲ್ಲಿಂದು ಉದ್ಘಾಟಿಸಿದರು.ಇದೇ ವೇಳೆ , ತುಮಕೂರು ಚಿಟ್ಟೆಗಳು ಹಾಗೂ ಹಾವುಗಳು ಎಂಬ ಶೀರ್ಷಿಕೆಯ ಭಿತ್ತಿಚಿತ್ರ ಬಿಡುಗಡೆಗೊಳಿಸಿ, ಅರಣ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಸನ್ಮಾನಿಸಿದರು. ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಜಿ.ಪರಮೇಶ್ವರ್, ಭೂಮಿ ಮೇಲಿನ ಪ್ರತಿಯೊಬ್ಬರು ಸಹಬಾಳ್ವೆಯಿಂದ ಬದುಕಬೇಕು, ಮಾಲಿನ್ಯದಿಂದಾಗಿ ಜಾಗತಿಕ ತಾಪಮಾನ ಹೆಚ್ಚಾಗುತ್ತಿದೆ. ಅರಣ್ಯ ಸಂಪತ್ತು ಹಾಗೂ ವನ್ಯ ಜೀವಿಗಳ ನಶಿಸುತ್ತಿದೆ, ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡುವುದು, ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನು ರಕ್ಷಿಸುವುದು ಸರ್ಕಾರ ಸೇರಿದಂತೆ ಎಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು. ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವನ್ಯ ಜೀವಿ ರಕ್ಷಣೆ ಹಾಗೂ ಆರಣ್ಯಗಳ ಮಹತ್ವ ಕುರಿತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಯಿತು.
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…