Advertisement
ಸುದ್ದಿಗಳು

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

Share

ಚಾಮರಾಜನಗರ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ವನ್ಯಜೀವಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ (sterilization) ಮಾಡುವ ಚಿಂತನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಚಾಮರಾಜನಗರ ತಾಲ್ಲೂಕಿನ ಮರಿಯಾಲ ಮೇಲ್ಸೇತುವೆ ಬಳಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸರ್ಕಾರವು ಈ ಕುರಿತು ಅವೈಜ್ಞಾನಿಕ ಹಾಗೂ ಅನಾವಶ್ಯಕ ಯೋಜನೆ ರೂಪಿಸುತ್ತಿದೆ ಎಂದು ಆರೋಪಿಸಿದ ರೈತರು, ಈ ಕ್ರಮವನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು. ವಿಶೇಷವಾಗಿ ಕಬ್ಬು ಬೆಳೆಗಾರರು ತಮ್ಮ ಬೆಳೆಗಳಿಗೆ ವನ್ಯಜೀವಿಗಳ ಹಾನಿ ಹೆಚ್ಚುತ್ತಿರುವ ಹಿನ್ನೆಲೆ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕೆ ಹೊರತು ಇಂತಹ ಕ್ರಮ ಬೇಡ ಎಂದು ಹೇಳಿದರು.

ಈ ಸಂದರ್ಭದಲ್ಲಿ ರೈತ ಮುಖಂಡ ಭಾಗ್ಯರಾಜ್ ಮಾತನಾಡಿ, “ವನ್ಯಜೀವಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡುವುದು ಅಮಾನವೀಯ ಕ್ರಮವಾಗಿದ್ದು, ಪ್ರಕೃತಿ ಸಮತೋಲನಕ್ಕೆ ಧಕ್ಕೆಯಾಗಬಹುದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ತಡೆದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಬಂದ ಅಧಿಕಾರಿಗಳು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಪರಿಸ್ಥಿತಿ ನಿಯಂತ್ರಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Farmers in Chamarajanagar staged a road blockade protest opposing the proposed sterilization of wild animals to control human-wildlife conflict. They termed the move unscientific and inhumane, demanding sustainable and effective solutions instead.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

7 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

15 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

16 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

16 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago