ರಾಜ್ಯದಲ್ಲಿ ಯುವಶಕ್ತಿ ಯೋಜನೆ ಹಾಗೂ ಸ್ತ್ರೀ ಸಾಮರ್ಥ್ಯ ಯೋಜನೆ | ಉದ್ಯೋಗ ನೀಡುವ ಯೋಜನೆಗಳು ಇದು | 5 ಲಕ್ಷ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ |

October 25, 2022
4:16 PM

ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ ನೀಡುವ ಯೋಜನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಸಾಲ ಮತ್ತು ಅನುದಾನ ಕೊಡಲಾಗುತ್ತದೆ. ಐದು ಲಕ್ಷ ಮಹಿಳೆಯರಿಗೆ ಉದ್ಯೋಗ ಕೊಡುವ ಕಾರ್ಯಕ್ರಮ ಮಾಡುತ್ತಿದ್ದೇವೆ ಹೇಳಿದ್ದಾರೆ.

ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿಗೆ ಮಾಡುವುದಾಗಿ, ಪ್ರತಿ ಗ್ರಾಮದಲ್ಲಿ ಎರಡು ಯುವಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಅನುದಾನ ಕೊಡುತ್ತಿದ್ದೇವೆ ಎಂದರು. 5 ಲಕ್ಷ ಯುವಕರಿಗೆ ಕೊಡುವ ಯೋಜನೆ ಇದಾಗಿದ್ದು, ಎರಡು ಯೋಜನೆಗಳನ್ನು ಡಿಸೆಂಬರ್​​ನಲ್ಲಿ ಪ್ರಾರಂಭ ಮಾಡುವುದು ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ
March 11, 2026
7:19 AM
by: ದ ರೂರಲ್ ಮಿರರ್.ಕಾಂ
ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್
March 11, 2026
7:08 AM
by: ದ ರೂರಲ್ ಮಿರರ್.ಕಾಂ
ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ
March 10, 2026
10:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror