Advertisement
ಸುದ್ದಿಗಳು

ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ರಾಜ್ಯ ಸರ್ಕಾರದಿಂದ ‘ಅಕ್ಕ ಪಡೆ’ಗೆ ಚಾಲನೆ

Share

ರಾಜ್ಯ ಸರ್ಕಾರ ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯಗಳ ನಿಗ್ರಹ, ಕಾನೂನಿನ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಅಕ್ಕ ಪಡೆ ಗೆ ಚಾಲನೆ ನೀಡಿದ್ದಾರೆ. ಇವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನೇತೃತ್ವದಲ್ಲಿ ಈ ಉಪಕ್ರಮದಲ್ಲಿ ಪ್ರತಿ ಪಡೆಯಲ್ಲಿ ತರಬೇತಿ ಪಡೆದ ಪೊಲೀಸ್ ಸಿಬ್ಬಂದಿ ಮತ್ತು ಎನ್‍ಸಿಸಿ ಕೆಡೆಡ್‍ಗಳಾಗಿದ್ದಾರೆ.

ಈ ತಂಡ ಬಸ್ ನಿಲ್ದಾಣ, ಕಾಲೇಜು, ಹಾಸ್ಟೆಲ್, ಮಾಲ್‍ಗಳು ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗಲಿದ್ದು, ಮಾತ್ರವಲ್ಲದೆ, ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಸಂಚಾರ ನಿಯಮಗಳು, ಮಾದಕ ಪದಾರ್ಥಗಳ ಬಳಕೆಯ ಪರಿಣಾಮಗಳು, ತುರ್ತು ಸಹಾಯವಾಣಿಗಳ ಕುರಿತಿ ವಿದಾರ್ಥಿಗಳಲ್ಲಿ ಜಾಗೃತಿ ಮೂಡಿಸಲಿದೆ.

ಅಕ್ಕ ಪಡೆಯ ಮೂಲ ಉದ್ದೇಶ ಮಹಿಳೆಯರು ಮತ್ತು ಮಕ್ಕಳ ಮೇಳಿನ ದೌರ್ಜನ್ಯ ತಡೆಗಟ್ಟುವುದ, ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವುದು, ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ತ್ವರಿತಗತಿಯಲ್ಲಿ ಬೆಂಬಲ ನೀಡುವುದು ಆಗಿದೆ.

ಪೊಲೀಸ್ ಇಲಾಖೆಯ ಹೊಯ್ಸಳ ಗಸ್ತು ಮಾದರಿಯಲ್ಲಿ ಅಕ್ಕ ಪಡೆಗಳೂ ಸಹ ಸಾರ್ವಜನಿಕ ಸ್ಥಳಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 7 ವರೆಗೆ ಗಸ್ತು ತಿರುಗಲಿದೆ. ಈ ಕಾರ್ಯಾಚರಣೆಗಾಗಿ ಹೊಯ್ಸಳ ವಾಹನಗಳ ಮಾದರಿಯಲ್ಲಿ ಮಾರ್ಪಾಡು ಮಾಡಿದ ವಾಹನಗಳನ್ನು ಬಳಸಲಾಗುತ್ತದೆ. ಪ್ರತಿ ಪಡೆಯು 35-45 ವಯೋಮಾನದ ಆರರಿಂದ ಹತ್ತು ಸದಸ್ಯರಿರಲಿದ್ದು, ಇವರಲ್ಲಿ ಕನಿಷ್ಠ ಇಬ್ಬರು ಮಹಿಳಾ ಪೊಲೀಸ್ ಕಾನ್‍ಸ್ಟೆಬಲ್‍ಗಳು ಮತ್ತು ತರಬೇತಿ ಪಡೆದ ಎನ್‍ಸಿಸಿ ಕೆಡೆಟ್‍ಗಳಿರುತ್ತಾರೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

23 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

23 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

23 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

24 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago