ಪುತ್ತೂರಿನಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮ

July 18, 2024
10:08 AM

ಸ್ವರಕ್ಷಣೆಯ ವಿಚಾರದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಗತ್ಯವಾಗಿದ್ದು, ಮುಂದಿನ ದಿನದಲ್ಲಿ ಕಾರ್ಯಾಗಾರಗಳನ್ನು ನಡೆಸಲಾಗುವುದು. ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ. ಸಂಸ್ಥೆಯ ಸಿಬ್ಬಂದಿಗಳಿಗೆ ಸೇರಿ ಆಸುಪಾಸಿನ ಜನರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಹೇಳಿದರು.

ಜೆಸಿಐ ಮುಳಿಯ ಟ್ರೈನಿಂಗ್ ಹಾಲ್ ನಲ್ಲಿ ಮುಳಿಯ ಜ್ಯುವೆಲ್ಸ್ ಪುತ್ತೂರು, ಮಹಿಳಾ ಪೊಲೀಸ್ ಠಾಣೆ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಯುವ ಸಹಯೋಗದಲ್ಲಿ ನಡೆದ ಮಹಿಳಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪುತ್ತೂರು ಮಹಿಳಾ ಠಾಣೆಯಾ ಉಪನಿರೀಕ್ಷಕಿ ಭವಾನಿ ಮಾತನಾಡಿ ಪೊಕ್ಸೋ ಕಾಯ್ದೆಯಲ್ಲಿ ೧೮ ವರ್ಷದ ಒಳಗಿನ ಗಂಡು ಹೆಣ್ಣು ಬೇಧವಿಲ್ಲದೆ ಮಕ್ಕಳೆಂದು ಪರಿಗಣಿಸಲಾಗುತ್ತದೆ. ಪ್ರಕರಣಗಳಲ್ಲಿ ದೂರು ದಾಖಲಾದಾಗ ಕೇವಲ ಆರೋಪಿಗಳಾಗಿದ್ದರೆ, ಪೊಕ್ಸೋದಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಅವರು ಅಪರಾಧಿಗಳಾಗಿರುತ್ತಾರೆ. ಪೋಷಕರು ತಮ್ಮ ಮಕ್ಕಳ ಚಲನವಲಗಳ ಬಗ್ಗೆ ನಿಗಾ ಇಡುವ ಜತೆಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕು ಎಂದು ತಿಳಿಸಿದರು.

ಪೊಲೀಸ್ ಸಿಬ್ಬಂದಿಗಳಿಗೆ ಮುಳಿಯ ಜ್ಯುವೆಲ್ಸ್ ವತಿಯಿಂದ ರೈನ್ ಕೋಟ್ ವಿತರಣೆ ಮಾಡಲಾಯಿತು. ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಪುತ್ತೂರು ಮಹಿಳಾ ಠಾಣೆಯಾ ಉಪನಿರೀಕ್ಷಕಿ ಸರಿತಾ ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆನೆ ದಾಳಿ | ಅರಣ್ಯ ಸಚಿವರ ಸೂಚನೆ
December 17, 2025
9:44 PM
by: ದ ರೂರಲ್ ಮಿರರ್.ಕಾಂ
2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..
December 17, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror