#Women’sReservationBill | ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಮಹಿಳಾ ಮೀಸಲಾತಿ ಮಸೂದೆ | 26 ವರ್ಷಗಳ ಬಳಿಕ ಸಿಕ್ಕ ಅನುಮೋದನೆ

September 19, 2023
10:38 AM
ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡುವ ಗುರಿಯನ್ನು ಹೊಂದಿದೆ. ಇದಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಸ್ಥಾನಗಳಲ್ಲಿ ಮೂರನೇ ಒಂದು ಭಾಗವನ್ನು ಈ ಸಮುದಾಯಗಳ ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಅದು ಷರತ್ತು ವಿಧಿಸುತ್ತದೆ.

ಕಳೆದ 2 ದಶಕಗಳಿಗಿಂತಲೂ ಹೆಚ್ಚು ಕಾಲ ಅನುಮೋದನೆಗಾಗಿ ಪರ ವಿರೋಧ ಪಕ್ಷಗಳ ಎಳೆದಾಟಕ್ಕೆ ಕಾರಣವಾಗಿದ್ದ ಮಹಿಳಾ ಮೀಸಲಾತಿ ಮಸೂದೆ (Women’s Reservation Bill) ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಮೂಲಗಳು ತಿಳಿಸಿವೆ. ಈ ಮಸೂದೆ ಅಂಗೀಕಾರವಾದರೆ ಸಂಸತ್ತು ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಅಂದರೆ ಶೇಕಡ 33ರಷ್ಟು ಸ್ಥಾನಗಳು ಮೀಸಲಾಗಲಿವೆ.

Advertisement

ಕಳೆದ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮಸೂದೆಯನ್ನು ಅಂಗೀಕರಿಸುವಂತೆ ಒತ್ತಾಯಿಸಿದ್ದವು. ವಿಶೇಷ ಅಧಿವೇಶನದಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಸಭೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, “ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ತಿಳಿಸಿದ್ದರು.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಿ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಸಂಸತ್‌ನ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿಲ್ಲ. ಮಹಿಳಾ ಸಂಸದರು ಲೋಕಸಭೆಯ 15% ಗಿಂತ ಕಡಿಮೆ ಪಾಲನ್ನು ಹೊಂದಿದ್ದಾರೆ. ಮಹಿಳೆಯರ ಪ್ರಾತಿನಿಧ್ಯವು ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ 10% ಗಿಂತ ಕಡಿಮೆಯಾಗಿದೆ.

Source : Digital Media

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ
May 9, 2025
7:51 AM
by: ದ ರೂರಲ್ ಮಿರರ್.ಕಾಂ
ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |
May 9, 2025
7:46 AM
by: ದ ರೂರಲ್ ಮಿರರ್.ಕಾಂ
ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?
May 9, 2025
7:39 AM
by: ದ ರೂರಲ್ ಮಿರರ್.ಕಾಂ
ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ
May 8, 2025
8:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group