ಕಳೆದ 2 ದಶಕಗಳಿಗಿಂತಲೂ ಹೆಚ್ಚು ಕಾಲ ಅನುಮೋದನೆಗಾಗಿ ಪರ ವಿರೋಧ ಪಕ್ಷಗಳ ಎಳೆದಾಟಕ್ಕೆ ಕಾರಣವಾಗಿದ್ದ ಮಹಿಳಾ ಮೀಸಲಾತಿ ಮಸೂದೆ (Women’s Reservation Bill) ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಮೂಲಗಳು ತಿಳಿಸಿವೆ. ಈ ಮಸೂದೆ ಅಂಗೀಕಾರವಾದರೆ ಸಂಸತ್ತು ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಅಂದರೆ ಶೇಕಡ 33ರಷ್ಟು ಸ್ಥಾನಗಳು ಮೀಸಲಾಗಲಿವೆ.
ಕಳೆದ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮಸೂದೆಯನ್ನು ಅಂಗೀಕರಿಸುವಂತೆ ಒತ್ತಾಯಿಸಿದ್ದವು. ವಿಶೇಷ ಅಧಿವೇಶನದಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಸಭೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, “ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ತಿಳಿಸಿದ್ದರು.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಿ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಸಂಸತ್‌ನ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿಲ್ಲ. ಮಹಿಳಾ ಸಂಸದರು ಲೋಕಸಭೆಯ 15% ಗಿಂತ ಕಡಿಮೆ ಪಾಲನ್ನು ಹೊಂದಿದ್ದಾರೆ. ಮಹಿಳೆಯರ ಪ್ರಾತಿನಿಧ್ಯವು ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ 10% ಗಿಂತ ಕಡಿಮೆಯಾಗಿದೆ.
Source : Digital Media
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…