ಶುರುವಾಯ್ತು ಹೆದ್ದಾರಿ ಅಭಿವೃದ್ಧಿ ಕಾಲ | ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಕಾಮಗಾರಿಗೆ ಚಾಲನೆ | ಇನ್ನು ಮುಂದೆ ಪ್ರಯಾಣ ಬಲು ಸುಲಭ |

March 12, 2023
7:44 PM

ಮೈಸೂರು-ಕುಶಾಲನಗರ  ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ಬೆಂಗಳೂರು-ಮಂಗಳೂರು ರಸ್ತೆ ಸಂಚಾರಕ್ಕೆ ವೇಗ ಕಲ್ಪಿಸುವ ಕಾಲ ಸನ್ನಿಹಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಇದರಿಂದ ಹಲವು ವರ್ಷಗಳ ಬೇಡಿಕೆಯಾಗಿದ್ದ ಕುಶಾಲನಗರದಿಂದ ಮಾಣಿವರೆಗಿನ ರಸ್ತೆ ಚತುಷ್ಪಥವಾಗುವ ಕನಸು ನನಸಾಗುತ್ತಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ಪ್ರಯಾಣದ ಸಮಯ ಇಳಿಕೆಯಾಗಲಿದೆ.

Advertisement
Advertisement
Advertisement

Advertisement

ಮೊದಲ ಹಂತವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ () ಇಂದು ಲೋಕಾರ್ಪಣೆಗೊಂಡಿತು. ಈ ಯೋಜನೆಯಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಕ್ಕಂತಾಗಿದೆ. ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯ 3 ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆ ಹಾಗೂ ಕೃಷಿ ಚಟುವಟಿಕೆ ಅಭಿವೃದ್ಧಿಗೂ ಪ್ರೋತ್ಸಾಹ ದಕ್ಕಿದಂತಾಗಿದೆ.

ಇದರ ಮುಂದುವರಿದ ಭಾಗವಾಗಿ 92.33 ಕಿ.ಮೀ ಉದ್ದದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. 4,128.92 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು-ಕುಶಾಲನಗರ ಚುತುಷ್ಪಥ ಹೆದ್ದಾರಿಯಾದರೆ, ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸುವ ಸಮಯದಲ್ಲಿ ಇಳಿಕೆಯಾಗಲಿದೆ. ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸಲು ಹಾಲಿ 5 ಗಂಟೆ ಸಮಯ ಬೇಕು. ಚತುಷ್ಪಥ ಹೆದ್ದಾರಿಯಾದರೆ ಈ ಸಮಯ ಎರಡೂವರೆ ಗಂಟೆಗೆ ಇಳಿಯುತ್ತದೆ. ಆ ಮೂಲಕ ಪ್ರಯಾಣಿಕರಿಗೆ ಎರಡೂವರೆ ಗಂಟೆ ಉಳಿತಾಯವಾಗುತ್ತದೆ. ಈ ಹೆದ್ದಾರಿ ಉತ್ತಮ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ

Advertisement

ಎರಡನೇ ಹಂತದಲ್ಲಿ ಕುಶಾಲನಗರ-ಸಂಪಾಜೆ, ಮೂರನೇ ಹಂತದಲ್ಲಿ ಸಂಪಾಜೆಯಿಂದ-ಮಾಣಿಗೆ ಚತುಷ್ಪಥ ಹೆದ್ದಾರಿ ನಿರ್ಮಾಣವಾಗಲಿದೆ. ಈ ಹಂತದ ಕಾಮಗಾರಿಗೆ ಗ್ರೀನ್ ಸಿಗ್ನಲ್ ಸಿಕ್ಕರೆ, ಬೆಂಗಳೂರು-ಮಂಗಳೂರು ಪ್ರಯಾಣದ ಸಮಯದಲ್ಲಿ ಕಡಿತವಾಗಲಿದೆ.

ಸದ್ಯ ಮೈಸೂರು ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ 395 ಕಿ.ಮೀ ಇದ್ದು ಪ್ರಯಾಣಿಸಲು 8 ರಿಂದ 9 ಗಂಟೆ ಸಮಯ ಬೇಕಾಗುತ್ತದೆ. ಚತುಷ್ಪಥ ರಸ್ತೆಯಾದರೆ ಆ ಸಮಯ 5 ಗಂಟೆಗೆ ಇಳಿಕೆಯಾಗಲಿದೆ. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror