ಇನ್ನು ಹೊರಬಾರದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರು | ರ‍್ಯಾಟ್‌ಹೋಲ್‌ ಮೈನಿಂಗ್‌ ಮೂಲಕ ರಕ್ಷಣೆಗೆ ಮಾಸ್ಟರ್‌ ಪ್ಲ್ಯಾನ್‌ | ಈ ಐಡಿಯಾದಿಂದ ಕಾರ್ಮಿಕರು ಹೊರ ಬರುತ್ತಾರಾ.?

November 28, 2023
12:06 PM

ವಿಜ್ಞಾನ ಎಷ್ಟೇ ಮುಂದುವರೆದರು ಕೆಲವು ಸಂದರ್ಭಗಳಲ್ಲಿ ಅವು ಕೆಲಸಕ್ಕೆ ಬರುವುದಿಲ್ಲ. 17 ದಿನಗಳ ಹಿಂದೆ ಉತ್ತರಾಖಂಡದ ಉತ್ತರಕಾಶಿ(Uttarakashi)ಯಲ್ಲಿ  ಸುರಂಗ ಕುಸಿದ ಪರಿಣಾಮ ಸಿಲುಕಿದ 41 ಕಾರ್ಮಿಕರನ್ನು (Uttarakhand Tunnel Collapse) ಹೊರ ತೆಗೆಯುವ ಕಾರ್ಯ ಇನ್ನೂ ಆಗಲಿಲ್ಲ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಆದರೆ ಕಾರ್ಮಿಕರು ಮಾತ್ರ ಸುರಂಗದಡಿಯಲ್ಲೇ ದಿನ ಕಳೆಯುತ್ತಿದ್ದಾರೆ. ಅವರನ್ನು ಹೊರತೆಗೆಯಲು ಅದೇನೇನೋ ಯೋಜನೆಗಳನ್ನು ರೂಪಿಸಿದರೂ ಸಾಧ್ಯವಾಗಲಿಲ್ಲ. ಇದೀಗ ಯಂತ್ರಗಳನ್ನು ಬಳಸದೇ ಮ್ಯಾನುವಲ್‌ ಡ್ರಿಲ್ಲಿಂಗ್‌ (Manual Drilling) ಮೂಲಕವೇ ರಕ್ಷಣಾ ಕಾರ್ಯಾಚರಣೆಗೆ ತಯಾರಿ ನಡೆದಿದೆ.

Advertisement
Advertisement
Advertisement
Advertisement

ಡ್ರಿಲ್ಲಿಂಗ್‌ ಯಂತ್ರಗಳ ಸಮಸ್ಯೆಯಿಂದಾಗಿ ಯಂತ್ರಗಳನ್ನು ಬಳಸದೆಯೇ ಮ್ಯಾನುವಲ್‌ ಡ್ರಿಲ್ಲಿಂಗ್‌ ಕೈಗೊಳ್ಳಲಾಗುತ್ತಿದೆ. ಅದರಲ್ಲೂ, ರ‍್ಯಾಟ್‌ ಹೋಲ್‌ ಮೈನಿಂಗ್‌ (Rat Hole Mining) ಮೂಲಕ 41 ಜನರನ್ನು ರಕ್ಷಿಸಲು ಮಾಸ್ಟರ್‌ ಪ್ಲ್ಯಾನ್‌ ರೂಪಿಸಲಾಗಿದೆ. ಈಗಾಗಲೇ ಸುಮಾರು 12 ತಜ್ಞರ ತಂಡವು ರ‍್ಯಾಟ್‌ ಹೋಲ್‌ ಮೈನಿಂಗ್‌ ಡ್ರಿಲ್ಲಿಂಗ್‌ ಆರಂಭಿಸಿದೆ.

Advertisement

ಏನಿದು ರ‍್ಯಾಟ್‌ ಹೋಲ್‌ ಮೈನಿಂಗ್‌?
ಚಿಕ್ಕದಾದ ರಂಧ್ರಗಳನ್ನ ಕೊರೆದು ಮನುಷ್ಯರು ಸುಲಭವಾಗಿ ಆ ರಂಧ್ರದಿಂದ ಮೂಲಕ ಹೊರಬರುವಂತೆ ಮಾಡುವುದು. ಉತ್ತರಕಾಶಿ ಸುರಂಗದಲ್ಲಿ ಯಂತ್ರಗಳಿಂದಲೂ ಕೊರೆಯಲು ಸಾಧ್ಯವಾಗದ ಕಾರಣ ಈ ಪ್ಲ್ಯಾನ್‌ ರೂಪಿಸಲಾಗಿದೆ. ಲಂಬವಾಗಿ 86 ಮೀಟರ್‌ ಕೊರೆಯುವ ಸವಾಲಿದ್ದು, ಈಗಾಗಲೇ 36 ಮೀಟರ್‌ ಕೊರೆಯಲಾಗಿದೆ. ಈಗ ಅಡ್ಡಲಾಗಿ ರ‍್ಯಾಟ್‌ ಹೋಲ್‌ ಮೈನಿಂಗ್‌ ತಂತ್ರದ ಮೂಲಕ ಕೊರೆಯುವ ಕೆಲಸ ಆರಂಭಿಸಲಾಗಿದೆ. ಈ ಪ್ಲ್ಯಾನ್‌ ಯಶಸ್ವಿಯಾದರೂ ಕಾರ್ಮಿಕರ ರಕ್ಷಣೆಗೆ ಇನ್ನೂ 3 ದಿನ ಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್‌ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್‌ ಉದ್ದದ ಸುರಂಗ ಕುಸಿದಿತ್ತು. ನ. 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಷ್ಟಾದರೂ ಕ್ಷಿಪ್ರವಾಗಿ ಕಾರ್ಮಿಕರನ್ನು ರಕ್ಷಣೆ ಮಾಡಲು ಆಗಿರಲಿಲ್ಲ.

Advertisement
Due to the problem of drilling machines, manual drilling is being carried out without using machines. In particular, a master plan has been formulated to rescue 41 people through Rat Hole Mining. A team of around 12 experts has already started rat hole mining drilling.
- ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror