ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ ನೀಡಲಾಗುತ್ತಿದೆ. ರೈತರು ಆರ್ಥಿಕವಾಗಿ ಮತ್ತಷ್ಟು ಸಬಲರಾಗಲು ಇದು ಸಹಕಾರಿಯಾಗಿದೆ. ಇತ್ತೀಚೆಗೆ ಕೃಷಿಯಲ್ಲಿ ದೂರ ಶಿಕ್ಷಣ ಪಡೆಯುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ವೈ.ಎನ್ ಶಿವಲಿಂಗಯ್ಯ ಹೇಳಿದರು.
ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿಂದು ಕೃಷಿಯಲ್ಲಿ ದೂರ ಶಿಕ್ಷಣ ಕುರಿತ ರಾಜ್ಯ ಮಟ್ಟದ ಕಾರ್ಯಗಾರ ಆಯೋಜಿಸಲಾಗಿತ್ತು. ಕೃಷಿಯಲ್ಲಿ ಇತ್ತೀಚಿನ ಆವಿಷ್ಕಾರಗಳು, ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆ ಮಾಹಿತಿ ನೀಡಲಾಯಿತು. ಈ ಸಂದರ್ಭ ಅವರು ಮಾತನಾಡಿದರು. ರೈತರಿಗೆ ತಂತ್ರಜ್ಞಾನ ಮತ್ತು ಪರಿಕರಗಳನ್ನು ಪೂರೈಸುವ ಉದ್ದೇಶದಿಂದ ಕಾರ್ಯಗಾರ ಆಯೋಜಿಸಲಾಗಿದ್ದು, ತಂಜ್ಞರು ಮತ್ತು ವಿಜ್ಞಾನಿಗಳು ಕೃಷಿ ಬೀಜ ಬಿತ್ತನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದರು.
ಜಿಕೆವಿಕೆ ದೂರ ಶಿಕ್ಷಣ ಸಂಯೋಜಕರು ಮತ್ತು ಮುಖ್ಯಸ್ಥ ಡಾ.ಜಿ ಗಂಗಾಧರ್ ಈಶ್ವರ್ ರಾವ್, ಕುಲಸಚಿವ ಡಾ.ಕೆ.ಸಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.