ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನ ಆಚರಿಸಲಾಗುತ್ತದೆ. ರಕ್ತದಾನದ ಮಹತ್ವ ತಿಳಿಸಲು ಮತ್ತು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಜನರನ್ನು ಜಾಗೃತಗೊಳಿಸುವುದು ವಿಶ್ವ ರಕ್ತದಾನಿಗಳ ದಿನ ಆಚರಣೆಯ ಉದ್ದೇಶ. 18 ರಿಂದ 65 ವರ್ಷದೊಳಗಿನ ಆರೋಗ್ಯವಂತ ಪುರುಷರು ಪ್ರತಿ ಮೂರು ತಿಂಗಳಿಗೊಮ್ಮೆ, ಮಹಿಳೆಯರು ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತದಾನದ ನಂತರ ದಾನಿಗಳ ದೇಹದಲ್ಲಿ ರಕ್ತ ಪುನರ್ ಉತ್ಪತ್ತಿಯಾಗಲಿದೆ. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಹೀಗಾಗಿ ನಾಗರಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗುವುದರಿಂದ ರಕ್ತದ ತ್ವರಿತ ಅಗತ್ಯವಿರುವ ಜೀವಗಳನ್ನು ಉಳಿಸಬಹುದು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel