ವಿಶ್ವ ಪರಿಸರ ದಿನ | #BeatPlasticPollution | ಕಾಪಾಡಬೇಕಿದೆ ಭೂಮಿ, ಪರಿಸರ |

June 5, 2023
2:21 PM

ಭೂಮಿ ನಮ್ಮೆಲ್ಲರ ಮನೆ. ಇದನ್ನು ಮುಂದಿನ ಪೀಳಿಗೆಗೆ  ಉಳಿಸುವುದು ನಮ್ಮ ಕರ್ತವ್ಯ. ದಿನದಿಂದ ದಿನಕ್ಕೆ ಹಸಿರಾದ ಭೂಮಿ ಕಡಿಮೆಯಾಗುತ್ತಿದೆ. ಹಾಗಾಗಿ ಎಚ್ಚರಿಕೆಯಿಂದ ಪರಿಸರವನ್ನು ಕಾಪಾಡಿಕೊಳ್ಳಬೇಕಾಗಿದೆ. 50 ವರ್ಷಗಳ ಹಿಂದಿನ ಉದ್ದೇಶ ಇಂದಿಗೂ ಹಾಗೆಯೇ ಇದೆ. ಹಾಗಾಗಬಾರದು, ಪ್ರತಿ ವರ್ಷ ಪರಿಸರ ನಾಶವಾಗದೇ ಹಿಂದೆ ಅಳಿದು ಹೋದ ಅರ್ಧದಷ್ಟು ಹಸಿರನ್ನಾದರೂ ಬೆಳೆಸಬೇಕು. ಹಾಗಾದಲ್ಲಿ ಮಾತ್ರ ನಮ್ಮ ಪರಿಸರವನ್ನು ಉಳಿಸಿಕೊಳ್ಳಲು ಸಾಧ್ಯ. ಜೊತೆಗೆ ಜಾಗತಿಕ ತಾಪಮಾನ ಏರಿಕೆಯು ಒಂದು ದೊಡ್ಡ ಸವಾಲಾಗಿದ್ದು ಆರೋಗ್ಯಕರ ಜೀವನ ನಡೆಸಲು ಮತ್ತು ಪ್ರಕೃತಿಯ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಗಿದೆ. ಇವೆಲ್ಲ ಕಾರಣದಿಂದ ಜನರನ್ನು ಜಾಗೃತಗೊಳಿಸಲು ವರ್ಷದ ಒಂದು ದಿನ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ.

Advertisement
Advertisement
Advertisement

ಈ ದಿನದ ಮುಖ್ಯ ಉದ್ದೇಶ: ವಿಶ್ವ ಪರಿಸರ ದಿನವನ್ನು ಆಚರಿಸುವುದರಿಂದ ನಮ್ಮ ಪ್ರಕೃತಿಗೆ ಹಲವಾರು ಉಪಯೋಗಗಳಿವೆ. ಪರಿಸರಕ್ಕೆ ಸಂಬಂಧಿಸಿದಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿ ಪಡಿಸಲು ಅಭಿಯಾನ ಆರಂಭಿಸುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು. ಪರಿಸರವನ್ನು ನಾಶ ಮಾಡದಂತೆ ಜಾಗೃತಿ ಮೂಡಿಸುವುದು. ಪರಿಸರ ಪ್ರತಿಯೊಂದು ಜೀವಿಗೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸುವುದು ಈ ದಿನದ ಆಚರಣೆಯ ಹಿಂದಿರುವ ಮುಖ್ಯ ಉದ್ದೇಶವಾಗಿದೆ.

Advertisement

ಭೂಮಿಯಲ್ಲಿ ವಾಸಿಸುತ್ತಿರುವ ನಾವು ಸಂಪನ್ಮೂಲದ ಬಳಕೆಯನ್ನು ಸರಿಯಾಗಿ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಉಳಿಸಿ ಬೆಳಸಬೇಕು. ಇತ್ತೀಚಿನ ವರ್ಷಗಳಲ್ಲಿ ಪರಿಸರವು ಅತ್ಯಂತ ಕಲುಷಿತಗೊಂಡಿದೆ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ವಿಷಕಾರಿ ಅಂಶಗಳಿಂದ ತುಂಬಿದೆ. ನಮ್ಮ ಅನುಕೂಲತೆಗಳಿಗಾಗಿ ಪರಿಸರವನ್ನು ನಾವು ಹಾಳು ಮಾಡುತ್ತಿದ್ದೇವೆ. ಇದರಿಂದಾಗಿ ಮಣ್ಣು, ಗಾಳಿ, ನೀರು ಹೀಗೆ ಸಂಪೂರ್ಣ ಪರಿಸರ ನಾಶವಾಗುತ್ತಿದೆ. ಜೊತೆಗೆ ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಸಮಸ್ಯೆಗಳು ಸಹ ಗಣನೀಯವಾಗಿ ಹೆಚ್ಚಳವಾಗಿದೆ. ಇನ್ನಾದರೂ ಜಾಗೃತೆ ವಹಿಸಿ ನಮ್ಮ ಪರಿಸರವನ್ನು ಉಳಿಸಿಕೊಳ್ಳಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ
ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ
November 21, 2024
7:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror