ಭೂಮಿ ನಮ್ಮೆಲ್ಲರ ಮನೆ. ಇದನ್ನು ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮ ಕರ್ತವ್ಯ. ದಿನದಿಂದ ದಿನಕ್ಕೆ ಹಸಿರಾದ ಭೂಮಿ ಕಡಿಮೆಯಾಗುತ್ತಿದೆ. ಹಾಗಾಗಿ ಎಚ್ಚರಿಕೆಯಿಂದ ಪರಿಸರವನ್ನು ಕಾಪಾಡಿಕೊಳ್ಳಬೇಕಾಗಿದೆ. 50 ವರ್ಷಗಳ ಹಿಂದಿನ ಉದ್ದೇಶ ಇಂದಿಗೂ ಹಾಗೆಯೇ ಇದೆ. ಹಾಗಾಗಬಾರದು, ಪ್ರತಿ ವರ್ಷ ಪರಿಸರ ನಾಶವಾಗದೇ ಹಿಂದೆ ಅಳಿದು ಹೋದ ಅರ್ಧದಷ್ಟು ಹಸಿರನ್ನಾದರೂ ಬೆಳೆಸಬೇಕು. ಹಾಗಾದಲ್ಲಿ ಮಾತ್ರ ನಮ್ಮ ಪರಿಸರವನ್ನು ಉಳಿಸಿಕೊಳ್ಳಲು ಸಾಧ್ಯ. ಜೊತೆಗೆ ಜಾಗತಿಕ ತಾಪಮಾನ ಏರಿಕೆಯು ಒಂದು ದೊಡ್ಡ ಸವಾಲಾಗಿದ್ದು ಆರೋಗ್ಯಕರ ಜೀವನ ನಡೆಸಲು ಮತ್ತು ಪ್ರಕೃತಿಯ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಗಿದೆ. ಇವೆಲ್ಲ ಕಾರಣದಿಂದ ಜನರನ್ನು ಜಾಗೃತಗೊಳಿಸಲು ವರ್ಷದ ಒಂದು ದಿನ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ.
ಈ ದಿನದ ಮುಖ್ಯ ಉದ್ದೇಶ: ವಿಶ್ವ ಪರಿಸರ ದಿನವನ್ನು ಆಚರಿಸುವುದರಿಂದ ನಮ್ಮ ಪ್ರಕೃತಿಗೆ ಹಲವಾರು ಉಪಯೋಗಗಳಿವೆ. ಪರಿಸರಕ್ಕೆ ಸಂಬಂಧಿಸಿದಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿ ಪಡಿಸಲು ಅಭಿಯಾನ ಆರಂಭಿಸುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು. ಪರಿಸರವನ್ನು ನಾಶ ಮಾಡದಂತೆ ಜಾಗೃತಿ ಮೂಡಿಸುವುದು. ಪರಿಸರ ಪ್ರತಿಯೊಂದು ಜೀವಿಗೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸುವುದು ಈ ದಿನದ ಆಚರಣೆಯ ಹಿಂದಿರುವ ಮುಖ್ಯ ಉದ್ದೇಶವಾಗಿದೆ.
ಭೂಮಿಯಲ್ಲಿ ವಾಸಿಸುತ್ತಿರುವ ನಾವು ಸಂಪನ್ಮೂಲದ ಬಳಕೆಯನ್ನು ಸರಿಯಾಗಿ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಉಳಿಸಿ ಬೆಳಸಬೇಕು. ಇತ್ತೀಚಿನ ವರ್ಷಗಳಲ್ಲಿ ಪರಿಸರವು ಅತ್ಯಂತ ಕಲುಷಿತಗೊಂಡಿದೆ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ವಿಷಕಾರಿ ಅಂಶಗಳಿಂದ ತುಂಬಿದೆ. ನಮ್ಮ ಅನುಕೂಲತೆಗಳಿಗಾಗಿ ಪರಿಸರವನ್ನು ನಾವು ಹಾಳು ಮಾಡುತ್ತಿದ್ದೇವೆ. ಇದರಿಂದಾಗಿ ಮಣ್ಣು, ಗಾಳಿ, ನೀರು ಹೀಗೆ ಸಂಪೂರ್ಣ ಪರಿಸರ ನಾಶವಾಗುತ್ತಿದೆ. ಜೊತೆಗೆ ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಸಮಸ್ಯೆಗಳು ಸಹ ಗಣನೀಯವಾಗಿ ಹೆಚ್ಚಳವಾಗಿದೆ. ಇನ್ನಾದರೂ ಜಾಗೃತೆ ವಹಿಸಿ ನಮ್ಮ ಪರಿಸರವನ್ನು ಉಳಿಸಿಕೊಳ್ಳಬೇಕಾಗಿದೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…