Advertisement
ಸುದ್ದಿಗಳು

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

Share

ಪರಿಸರ, ನೀರು ಮತ್ತು ಆಹಾರ ಶುಚಿಯಾಗಿದ್ದರೆ ಜೀವಸಂಕುಲದ ರಕ್ಷಣೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿ ಇಟ್ಟು ರಕ್ಷಿಸಬೇಕು ಎಂದು ದರ್ಶನ್ ಎಚ್.ವಿ ಕರೆ ನೀಡಿದರು.

ಮಂಗಳೂರು ನಗರದ ಕೆಪಿಟಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿಕೊಂಡರೆ ಸಮಾಜವೂ ಉತ್ತಮ ಪರಿಸರವನ್ನು ಹೊಂದಲು ಸಾಧ್ಯವಾಗುತ್ತದೆ. ಆಧುನಿಕ ಜೀವನಶೈಲಿಯ ಒತ್ತಡಗಳಿಂದ ಪರಿಸರ ಹಾನಿಯಾಗುತ್ತಿದ್ದು, ಮುಂದಿನ ಪೀಳಿಗೆಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜೈಬುನ್ನಿಸಾ, ಪರಿಸರ ನಾಶದಿಂದ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಪರಿಸರವನ್ನು ಉಳಿಸಿದರೆ ಪರಿಸರವೇ ನಮ್ಮನ್ನು ರಕ್ಷಿಸುತ್ತದೆ ಎಂದು ಹೇಳಿದರು.

ಸಮಾರಂಭದಲ್ಲಿ ಜಯಲಕ್ಷ್ಮಿ ರಾಯಕೋಡ, ರಾಜಶೇಖರ ಪುರಾಣಿಕ್, ಹರೀಶ್ ಶೆಟ್ಟಿ, ಶ್ರೀ ನಿಕೇತನ್, ಮಂಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜೊತೆಗೆ ಸೀಡ್ ಬಾಲ್‌ಗಳು ಮತ್ತು ಬಟ್ಟೆ ಬ್ಯಾಗ್‌ಗಳನ್ನು ಹಂಚಲಾಯಿತು.

ಇದಕ್ಕೂ ಮುನ್ನ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯೆಯ್ಯಾಡಿಯಿಂದ ಕೆಪಿಟಿವರೆಗೆ ಜಾಥಾ ನಡೆಸಲಾಯಿತು. ಜಾಥಾಕ್ಕೆ ಬಸವರಾಜ್ ಚಾಲನೆ ನೀಡಿದರು.

Dakshina Kannada Deputy Commissioner Darshan H.V. said environmental protection is the responsibility of every citizen and urged people to maintain cleanliness around their surroundings. Speaking at the World Environment Day programme in Mangaluru, he emphasized that protecting nature is essential for the well-being of future generations.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

12 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

12 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

12 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

12 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago