ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |

June 5, 2025
10:07 PM

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನದಲ್ಲಿ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದರು.

“ತಾಯಿಯ ಹೆಸರಲ್ಲಿ- ಒಂದು ಸಸಿ” ಅಭಿಯಾನದಡಿ ಪ್ರಧಾನಿ ಅವರು, ಆಲದ ಸಸಿ ನೆಟ್ಟು ನೀರೆರೆದರು.ಈ ವೇಳೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ವೇಳೆ ದೆಹಲಿ,ರಾಜಸ್ತಾನ, ಹರಿಯಾಣ ಮತ್ತು ಗುಜರಾತ್ ರಾಜ್ಯಗಳ ಒಟ್ಟು 29 ಜಿಲ್ಲೆಗಳ ವ್ಯಾಪ್ತಿಯ ಅರಾವಳಿ ಗಿರಿಶ್ರೇಣಿಯಲ್ಲಿ, ಸಸ್ಯ ಸಂಪತ್ತು ವೃದ್ಧಿಸುವ, ಅರಾವಳಿ ಹಸಿರು ಗೋಡೆ ಯೋಜನೆಗೆ ಪ್ರಧಾನಿ ಚಾಲನೆ ನೀಡಿದರು. ಸುಮಾರು 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ, ಅರಣ್ಯೀಕರಣ, ಜಲಮೂಲಗಳ ವೃದ್ಧಿ ಹಾಗೂ ಜೀವ ವೈವಿಧ್ಯ ವೃದ್ಧಿಪಡಿಸುವ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ಮಹತ್ವದ ಯೋಜನೆ ಇದಾಗಿದೆ.   ಇದೇ ವೇಳೆ ಪ್ರಧಾನಿ , ದೆಹಲಿ ಸರ್ಕಾರದ ಸುಸ್ಥಿರ ಸಾರಿಗೆ ಉಪಕ್ರಮದಡಿ 200 ಎಲೆಕ್ಟ್ರಿಕ್ ಬಸ್ ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ
August 19, 2026
8:42 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ
August 19, 2026
6:48 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror