ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |

July 22, 2025
9:34 PM

ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ  ಜುಲೈ 22 ರಂದು ಮಾವಿನಹಣ್ಣಿನ ದಿನವನ್ನಾಗಿ ಆಚರಿಸಲಾಗುತ್ತದೆ. ದೇಶದಲ್ಲಿ ಮಾವು ಉತ್ಪಾದನೆಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದ್ದು, ರಾಜ್ಯದಲ್ಲಿ ಮಾವು ಉತ್ಪಾದನೆಯಲ್ಲಿ ಬೆಂಗಳೂರು ದಕ್ಷಿಣ ಎರಡನೇ ಸ್ಥಾನದಲ್ಲಿರುವುದು ವಿಶೇಷ. ಜಿಲ್ಲೆಯಲ್ಲಿ ಬೆಳೆದ ಮಾವಿಗೆ ವಿಶ್ವ ದರ್ಜೆಯ ಮಾನ್ಯತೆ ಇದೆ.

28 ತಳಿಗಳ ಸುಮಾರು 500 ಮಾವಿನ ಮರಗಳ ಕೃಷಿ ಮಾಡಿದ್ದು, ಉತ್ತಮ ಆದಾಯ ಸಿಗುತ್ತಿದೆ. ಜಿಲ್ಲೆಯಲ್ಲಿ ಮಾವನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಅಲ್ಲದೆ ಮಾವು ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಪ್ರಮುಖ ಬೆಳೆಯಾಗಿದೆ ಎನ್ನುತ್ತಾರೆ ಮಾವು ಬೆಳೆಗಾರರಾದ ಬಿ. ಸಿ. ವಾಸು. ಮತ್ತೋರ್ವ ರೈತ ಸಿದ್ದರಾಜು ಮಾತನಾಡುತ್ತಾ,  ಜಿಲ್ಲೆಯಲ್ಲಿ ಬೆಳೆದ ಮಾವನ್ನು ಜಗತ್ತಿನಾದ್ಯಂತ ರಫ್ತು ಮಾಡಲಾಗುತ್ತದೆ. ಇಲ್ಲಿ ಬೆಳೆದ ಮಾವಿಗೆ ಅಪಾರ ಬೇಡಿಕೆಯಿದೆ ಎನ್ನುತ್ತಾರೆ.

ಪೋಷಕಾಂಶಗಳಿಂದ ಸಮೃದ್ಧವಾಗಿರುವ ಮಾವು ಎಲ್ಲರು ಇಷ್ಟಪಡುವ ಹಣ್ಣಾಗಿದೆ. ಮಾವು ಬೆಳೆಯಲು ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ರೀತಿಯ ಸವಲತ್ತುಗಳನ್ನು ಒದಗಿಸಲಾಗುತ್ತಿದ್ದು, ರಿಯಾಯಿತಿ ದರದಲ್ಲಿ ಗುಣಮಟ್ಟದ ಕೀಟನಾಶಕಗಳ ಬಳಕೆಯ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ ಎನ್ನುತ್ತಾರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಈಶ್ವರಪ್ಪ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror