ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ ಜುಲೈ 22 ರಂದು ಮಾವಿನಹಣ್ಣಿನ ದಿನವನ್ನಾಗಿ ಆಚರಿಸಲಾಗುತ್ತದೆ. ದೇಶದಲ್ಲಿ ಮಾವು ಉತ್ಪಾದನೆಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದ್ದು, ರಾಜ್ಯದಲ್ಲಿ ಮಾವು ಉತ್ಪಾದನೆಯಲ್ಲಿ ಬೆಂಗಳೂರು ದಕ್ಷಿಣ ಎರಡನೇ ಸ್ಥಾನದಲ್ಲಿರುವುದು ವಿಶೇಷ. ಜಿಲ್ಲೆಯಲ್ಲಿ ಬೆಳೆದ ಮಾವಿಗೆ ವಿಶ್ವ ದರ್ಜೆಯ ಮಾನ್ಯತೆ ಇದೆ.
28 ತಳಿಗಳ ಸುಮಾರು 500 ಮಾವಿನ ಮರಗಳ ಕೃಷಿ ಮಾಡಿದ್ದು, ಉತ್ತಮ ಆದಾಯ ಸಿಗುತ್ತಿದೆ. ಜಿಲ್ಲೆಯಲ್ಲಿ ಮಾವನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಅಲ್ಲದೆ ಮಾವು ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಪ್ರಮುಖ ಬೆಳೆಯಾಗಿದೆ ಎನ್ನುತ್ತಾರೆ ಮಾವು ಬೆಳೆಗಾರರಾದ ಬಿ. ಸಿ. ವಾಸು. ಮತ್ತೋರ್ವ ರೈತ ಸಿದ್ದರಾಜು ಮಾತನಾಡುತ್ತಾ, ಜಿಲ್ಲೆಯಲ್ಲಿ ಬೆಳೆದ ಮಾವನ್ನು ಜಗತ್ತಿನಾದ್ಯಂತ ರಫ್ತು ಮಾಡಲಾಗುತ್ತದೆ. ಇಲ್ಲಿ ಬೆಳೆದ ಮಾವಿಗೆ ಅಪಾರ ಬೇಡಿಕೆಯಿದೆ ಎನ್ನುತ್ತಾರೆ.
ಪೋಷಕಾಂಶಗಳಿಂದ ಸಮೃದ್ಧವಾಗಿರುವ ಮಾವು ಎಲ್ಲರು ಇಷ್ಟಪಡುವ ಹಣ್ಣಾಗಿದೆ. ಮಾವು ಬೆಳೆಯಲು ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ರೀತಿಯ ಸವಲತ್ತುಗಳನ್ನು ಒದಗಿಸಲಾಗುತ್ತಿದ್ದು, ರಿಯಾಯಿತಿ ದರದಲ್ಲಿ ಗುಣಮಟ್ಟದ ಕೀಟನಾಶಕಗಳ ಬಳಕೆಯ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ ಎನ್ನುತ್ತಾರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಈಶ್ವರಪ್ಪ.
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…