ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ

May 2, 2026
10:29 AM
ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ವಿವಿಧ ಕ್ರಮಗಳು ಕೈಗೊಳ್ಳಲಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆ 45 ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, 54 ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ತಿಳಿಸಿದ್ದಾರೆ.

ಜಿಲ್ಲೆಯ 25 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡುಬಂದಿದೆ. ಯಾದಗಿರಿ ತಾಲ್ಲೂಕು ವ್ಯಾಪ್ತಿಯ 21 ಗ್ರಾಮಗಳಿಗೆ 24 ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಗುರುಮಠಕಲ್ ತಾಲ್ಲೂಕು ವ್ಯಾಪ್ತಿಯ 12 ಗ್ರಾಮಗಳಲ್ಲಿ 15 ಕೊಳವೆಬಾವಿ, ವಡಗೇರಿ ತಾಲ್ಲೂಕು ವ್ಯಾಪ್ತಿಯ 7 ಗ್ರಾಮಗಳಲ್ಲಿ 10 ಕೊಳವೆಬಾವಿ ಹಾಗೂ ಸುರಪುರ ತಾಲ್ಲೂಕು ವ್ಯಾಪ್ತಿಯ 5 ಗ್ರಾಮಗಳಲ್ಲಿ 5 ಕೊಳವೆಬಾವಿಗಳ ಮೂಲಕ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 7,349 ನೀರಿನ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 7,203 ಮಾದರಿಗಳು ಕುಡಿಯಲು ಯೋಗ್ಯವಾಗಿವೆ. 146 ಮಾದರಿಗಳು ಅಯೋಗ್ಯವೆಂದು ಪತ್ತೆಯಾಗಿವೆ.

ಕುಡಿಯುವ ನೀರಿನ ದೂರುಗಳಿಗಾಗಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈವರೆಗೆ ಬಂದ 76 ದೂರುಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲೆಯ 471 ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 303 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಸ್ಥಗಿತಗೊಂಡಿರುವ 168 ಆರ್‌ಒ ಘಟಕಗಳ ಪೈಕಿ 41 ಘಟಕಗಳನ್ನು ದುರಸ್ತಿ ಮಾಡಲಾಗಿದೆ. ಉಳಿದ 127 ಘಟಕಗಳ ದುರಸ್ತಿಗೆ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಬೇಸಿಗೆ ಹಿನ್ನೆಲೆಯಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ಕಾಮಗಾರಿಗಳನ್ನು ವೇಗಗೊಳಿಸಲು ಹಾಗೂ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಇಒ ಸ್ಪಷ್ಟಪಡಿಸಿದ್ದಾರೆ.

To tackle drinking water shortage in Yadgir district, 45 villages are being supplied water through 54 rented borewells. Authorities are also repairing RO plants and accelerating Jal Jeevan Mission works to address the crisis.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror