ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

July 14, 2026
6:47 AM
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ ನೀರಿನ ಬೆಳೆಗಳಿಗೆ ಆದ್ಯತೆ ನೀಡುವಂತೆ ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

ಯಾದಗಿರಿ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ದುರ್ಬಲವಾಗಿರುವ ಹಿನ್ನೆಲೆಯಲ್ಲಿ ರೈತರು ಬೆಳೆಗಳನ್ನು ರಕ್ಷಿಸಿಕೊಳ್ಳಲು ತೇವಾಂಶ ಸಂರಕ್ಷಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಯಾದಗಿರಿ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸುಗೂರ ಸಲಹೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಳೆಯ ಕೊರತೆಯಿಂದ ಬೆಳೆ ಬೆಳವಣಿಗೆಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯ ಎಂದಿದ್ದಾರೆ.

ಬಿತ್ತನೆಗೂ ಮುನ್ನ ಬೀಜೋಪಚಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ದ್ವಿದಳ ಧಾನ್ಯಗಳ ಬೀಜಗಳಿಗೆ ರೈಜೋಬಿಯಂ ಹಾಗೂ ಏಕದಳ ಧಾನ್ಯಗಳಿಗೆ ಅಜೋಸ್ಪೇರಿಲಮ್ ಜೈವಿಕ ಗೊಬ್ಬರಗಳಿಂದ ಬೀಜೋಪಚಾರ ನಡೆಸಬೇಕು. ಇದರಿಂದ ಮೊಳಕೆ ಉತ್ತಮವಾಗುವುದರ ಜೊತೆಗೆ ಬೆಳೆ ಆರಂಭಿಕ ಹಂತದಲ್ಲಿಯೇ ಉತ್ತಮ ಬೆಳವಣಿಗೆ ಕಾಣಲಿದೆ ಎಂದು ಅವರು ತಿಳಿಸಿದ್ದಾರೆ.

ಇದರೊಂದಿಗೆ ಟ್ರೈಕೊಡರ್ಮಾ ಶಿಲೀಂಧ್ರನಾಶಕ ಬಳಸಿ ಬೀಜ ಸಂಸ್ಕರಣೆ ಮಾಡಿದರೆ ಆರಂಭಿಕ ಹಂತದಲ್ಲಿಯೇ ವಿವಿಧ ಶಿಲೀಂಧ್ರಜನ್ಯ ರೋಗಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲೆಯಲ್ಲಿ ನೀರಿನ ಲಭ್ಯತೆ ಕಡಿಮೆ ಇರುವ ಪ್ರದೇಶಗಳ ರೈತರು ನವಣೆ, ಜೋಳ ಹಾಗೂ ಸಜ್ಜೆ ಸೇರಿದಂತೆ ಕಡಿಮೆ ನೀರು ಬೇಕಾಗುವ ಬೆಳೆಗಳಿಗೆ ಆದ್ಯತೆ ನೀಡಬೇಕು. ಇಂತಹ ಬೆಳೆಗಳು ಕಡಿಮೆ ಮಳೆಯ ಪರಿಸ್ಥಿತಿಯಲ್ಲೂ ಉತ್ತಮ ಇಳುವರಿ ನೀಡುವ ಸಾಮರ್ಥ್ಯ ಹೊಂದಿದ್ದು, ರೈತರ ನಷ್ಟವನ್ನು ಕಡಿಮೆ ಮಾಡಲು ನೆರವಾಗಲಿವೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಅದರ ಜೊತೆಗೆ ಹೊಲಗಳಲ್ಲಿ ತೇವಾಂಶವನ್ನು ಹೆಚ್ಚು ದಿನಗಳವರೆಗೆ ಉಳಿಸಿಕೊಳ್ಳಲು ಮಣ್ಣಿನ ಸಂರಕ್ಷಣೆ, ಕಳೆ ನಿಯಂತ್ರಣ ಹಾಗೂ ಅಗತ್ಯವಿದ್ದಲ್ಲಿ ಸಾವಯವ ಮುಚ್ಚಳ (ಮಲ್ಚಿಂಗ್) ಮುಂತಾದ ಕ್ರಮಗಳನ್ನು ಅನುಸರಿಸುವಂತೆ ಕೃಷಿ ಇಲಾಖೆ ರೈತರಿಗೆ ಮನವಿ ಮಾಡಿದೆ.

ಮುಂಗಾರು ದುರ್ಬಲವಾಗಿರುವ ಈ ಸಂದರ್ಭದಲ್ಲಿ ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅನುಸರಿಸುವ ಮೂಲಕ ಬೆಳೆಗಳನ್ನು ಸಂರಕ್ಷಿಸಿಕೊಂಡರೆ ಉತ್ಪಾದನಾ ನಷ್ಟವನ್ನು ತಗ್ಗಿಸಬಹುದು ಎಂದು ಇಲಾಖೆ ತಿಳಿಸಿದೆ.

With the southwest monsoon remaining weak in Yadgir district, the Agriculture Department has advised farmers to adopt moisture conservation practices and prioritize seed treatment before sowing. Farmers in water-scarce areas have also been advised to cultivate low-water crops such as foxtail millet, sorghum and pearl millet to minimize crop losses.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ
July 14, 2026
6:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror