ಯಕ್ಷಗಾನದ ಮೇರು ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಬುಧವಾರ ಮುಂಜಾನೆ ನಿಧನ ಹೊಂದಿದರು. ಕಳೆದ ಕೆಲವು ದಿನಗಳಿಂದ ವಯೋಸಹಜವಾದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.
ಮೃತರು ಪತ್ನಿ ಇಬ್ಬರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರ ಪಾರ್ಥೀವ ಶರೀರವನ್ನು ಮಂಗಳೂರಿನ ಪಂಪ್ ವೆಲ್ ಬಳಿ ಇರುವ ಅವರ ಸ್ವಗೃಹದಲ್ಲಿ ಇರಿಸಲಾಗಿದ್ದು ಸಾರ್ವಜನಿಕರಿಗೆ ವೀಕ್ಷಣೆ ಮಾಡಲು ಅವಕಾಶ ನೀಡಲಾಗಿದೆ. ನಾಳೆ ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸುಂದರ್ ರಾವ್ ಅವರ ನಿಧನ ಯಕ್ಷಗಾನ ಲೋಕಕ್ಕೆ ಅಪಾರ ನಷ್ಟವಾಗಿದೆ ಎಂದು ಯಕ್ಷಗಾನ ಕಲಾವಿದರು ನೋವು ವ್ಯಕ್ತಪಡಿಸಿದ್ದಾರೆ.
ಕುಂಬಳೆ ಸುಂದರ ರಾವ್ ಅವರು ಯಕ್ಷಗಾನ ಕಲಾವಿದರಾಗಿಯೇ ಹೆಚ್ಚು ಪ್ರಸಿದ್ಧರು. 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಕುಂಬಳೆ ಸುಂದರ್ ರಾವ್ ಅವರು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಧರ್ಮಸ್ಥಳ, ಸುರತ್ಕಲ್, ಇರಾ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು. ಕಲಾಸೇವೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಖ್ಯಾತ ಯಕ್ಷಗಾನ ಕಲಾವಿದ ಕುಂಬಳೆ ಸುಂದರ ರಾವ್ ಇನ್ನಿಲ್ಲ"