ಯಕ್ಷಗಾನ ರಂಗದ ಹಾಸ್ಯ ಕಲಾವಿದರಾಗಿ ಪ್ರಸಿದ್ಧರಾಗಿದ್ದ ಪೆರುವಡಿ ನಾರಾಯಣ ಭಟ್ (96) ಮಂಗಳವಾರ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರಿನ ಬಪ್ಪಳಿಗೆ ತೆಂಕಿಲ ನಿವಾಸಿಯಾಗಿದ್ದ ನಾರಾಯಣ ಭಟ್ ಅವರು ಯಕ್ಷಗಾನದಲ್ಲಿ ಹಾಸ್ಯ ವಿಭಾಗವನ್ನು ಶ್ರೀಮಂತಗೊಳಿಸಿ ಹಾಸ್ಯಗಾರ ಸ್ಥಾನಕ್ಕೆ ಗೌರವವನ್ನು ತಂದುಕೊಟ್ಟು ಅಪೂರ್ವ ಕಲಾವಿದರಾಗಿದ್ದರು. ತನ್ನ ಎಂಟನೇ ವರ್ಷದಿಂದ ಯಕ್ಷರಂಗದಲ್ಲಿ ಭಾಗವಹಿಲು ಪ್ರಾರಂಭಿಸಿದ್ದರು.
1927 ರಲ್ಲಿ ಪದ್ಯಾಣ ಮನೆತನದಲ್ಲಿ ಜನಿಸಿದ ನಾರಾಯಣ ಭಟ್ಟರು ಧರ್ಮಸ್ಥಳ, ಸುರತ್ಕಲ್, ಕದ್ರಿ, ನಂದಾವರ, ಅರುವ, ಕುಂಬಳೆ, ಬಪ್ಪನಾಡು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದರು. 1954ರಲ್ಲಿ ಮುಲ್ಕಿ ಮೇಳದ ಸಂಚಾಲಕರಾಗಿ ಶ್ರೀ ಪೆರುವಡಿ ನಾರಾಯಣ ಭಟ್ಟರು ಸದ್ರಿ ಮೇಳವನ್ನು 11 ವರ್ಷಗಳ ಕಾಲ ಮುನ್ನಡೆಸಿದ್ದರು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…