ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

May 7, 2024
3:13 PM
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.

ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.  ಇದೇ ಸಂದರ್ಭ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲೆಯ ಪ್ರೋತ್ಸಾಹದ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯುತ್ತಿದೆ. ಇದೇ ಸಂದರ್ಭ ಒಬ್ಬ  ಕಲಾವಿದರನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮವೂ ನಡೆಯುತ್ತಿದೆ. ಈ  ಬಾರಿ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರನ್ನು ಗೌರವಿಸಲಾಗುತ್ತಿದೆ.

ಉಬರಡ್ಕ ಉಮೇಶ್‌ ಶೆಟ್ಟಿ ಅವರು ದಿ, ಕುರಿಯ ವಿಠಲ ಶಾಸ್ತ್ರೀ ಮತ್ತು ದಿ, ಪಡ್ರೆ ಚಂದು ಅವರಿಂದ ಯಕ್ಷಗಾನ ಕಲೆಯನ್ನು ಅಭ್ಯಸಿಸಿದ್ದರು. ಧರ್ಮಸ್ಥಳ ಲಲಿತಾ ಕಲಾಕೇಂದ್ರದ ಮೊದಲನೇ ವರ್ಷದ ವಿದ್ಯಾರ್ಥಿಯಾಗಿರುವ ಉಮೇಶ್‌ ಶೆಟ್ಟಿ ಅವರು 1972ರಲ್ಲಿ ಶ್ರೀ ಧರ್ಮಸ್ಥಳ ಮೇಳ ಮೂಲಕ ಕಲಾಸೇವೆ ಆರಂಭಿಸಿ 2015 ರ ವರೆಗೆ ಅಂದರೆ ಸುಮಾರು 44 ವರ್ಷ ಕಲಾಸೇವೆ ನಡೆಸಿದ್ದಾರೆ. ಸದ್ಯ ಶ್ರೀ ಹನುಮಗಿರಿ ಮೇಳದಲ್ಲಿ ಅತಿಥಿ ಕಲಾವಿದ.

ತನ್ನ ಸೋದರ ಮಾವನವರಾದ ದಿ. ಅಳಿಕೆ ರಾಮಯ್ಯ ರೈ ಅವರ ಪ್ರೇರಣೆಯಂತೆ ಯಕ್ಷಗಾನಕ್ಕೆ ಪಾದಾರ್ಪಣೆ ಮಾಡಿರುವ ಉಮೇಶ್‌ ಶೆಟ್ಟಿ ಅವರು, ಕಡತೋಕ ಭಾಗವತರು ಮತ್ತು ಚಿಪ್ಪಾರು ಬಲ್ಲಾಳರ  ಮಾರ್ಗದರ್ಶನದಲ್ಲಿ ಅಣ್ಣಪ್ಪ, ಕಂಸ, ಹಿರಣ್ಯಕಶ್ಯಪ, ದ್ರೋಣ, ಅತಿಕಾಯ, ಹನೂಮಂತ ಮೊದಲಾದ ವೇಷಗಳಿಗೆ ತನ್ನದೆ ಛಾಪು ಭಿತ್ತಿ ಮೇರು ಕಲಾವಿದರಾದರು. ಯಕ್ಷಗಾನದಿಂದ ಆರ್ಥಿಕವಾಗಿ ಗಳಿಸಿದ್ದು ಕಡಿಮೆ. ಜನಪ್ರಿಯತೆ ಮತ್ತು ಪ್ರಶಸ್ತಿಗಳ ಬೆನ್ನು ಹತ್ತಿದವರಲ್ಲ. ಸಹೃದಯ ಕಲಾಭಿಮಾನಿಗಳೇ ಅವರು ಸಂಪಾದಿಸಿದ ಆಸ್ತಿ. 2015 ರಲ್ಲಿ ವೃತ್ತಿಪರ ಮೇಳದಿಂದ ತಿರುಗಾಟಕ್ಕೆ ನಿವೃತ್ತಿ ಹೇಳಿದ್ದಾರೆ. ಇವರ ಕಲಾಸೇವೆಗೆ ಈಗಾಗಲೇ 100 ಅಧಿಕ ಸನ್ಮಾನ, ಗೌರವಗಳು ಸಂದಿವೆ.

ಯಕ್ಷಗಾನ ಬಯಲಾಟ
ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದಿಂದ ವೇದೋದ್ಧರಣ-ಶಿವ ಪಂಚಾಕ್ಷರಿ ಮಹಿಮೆ ಎಂಬ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ. 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror