Advertisement
ಕಲೆ-ಸಂಸ್ಕೃತಿ

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

Share

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ  ಉಜಿರೆ ಇವರ ಜಂಟಿ ಆಶ್ರಯದಲ್ಲಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ ಆಯೋಜನೆಗೊಂಡಿದೆ. 2025 ಜೂನ್ 30ರಿಂದ ಜುಲೈ 6ರ ತನಕ ‘ಶ್ರೀ ಸುಕೃತೀಂದ್ರ ಕಲಾ ಮಂದಿರ’ದಲ್ಲಿ ಸಂಜೆ 4 ರಿಂದ 8 ರ ತನಕ ಪ್ರಸಿದ್ಧ ಕಲಾವಿದರಿಂದ ವಿವಿಧ ಆಖ್ಯಾನಗಳ ತಾಳಮದ್ದಳೆಗಳು ನಡೆಯಲಿವೆ.

Advertisement
Advertisement

ಸಪ್ತಾಹ ಉದ್ಘಾಟನೆ: ಜೂನ್ 30 ಸೋಮವಾರ ಸಂಜೆ ಗಂಟೆ 4ಕ್ಕೆ ಯಕ್ಷಗಾನ ದಶಾವತಾರಿ  ಕೆ.ಗೋವಿಂದ ಭಟ್ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಇದರ ಮ್ಹಾಲಕ  ಬಲರಾಮ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಅಶೋಕ ನಾಮದೇವ ಪ್ರಭು ಹಾಗೂ ಪುತ್ತೂರು ಶ್ರೀ ರಾಘವೇಂದ್ರ ಮಠದ ಕಾರ್ಯದರ್ಶಿ  ಯು ಪೂವಪ್ಪ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

ಸಪ್ತಾಹ ಸಮಾರೋಪ : ಜುಲೈ 6, ರವಿವಾರದಂದು ಸಂಜೆ ಗಂಟೆ 4ಕ್ಕೆ ಎಡನೀರು ಮಠಾಧೀಶ ಪರಮಪೂಜ್ಯ  ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು, ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಇವರ ದಿವ್ಯ ಸಾನ್ನಿಧ್ಯದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಹೊನ್ನಾವರದ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ (ರಿ,) ಕೆರೆಮನೆ-ಗುಣವಂತೆ ಹಾಗೂ ಹಿರಿಯ ಸ್ತ್ರೀವೇಷಧಾರಿ  ಕೊಕ್ಕಡ ಈಶ್ವರ ಭಟ್ಟರಿಗೆ ‘ಕುರಿಯ ಪ್ರಶಸ್ತಿ’ ಪ್ರದಾನಿಸಲಾಗುವುದು. ಈ ಸಂದರ್ಭದಲ್ಲಿ ಬೆಂಗಳೂರಿನ ಉದ್ಯಮಿ, ಕಲಾಪೋಷಕ  ಆರ್.ಕೆ.ಭಟ್ಟರಿಗೆ ‘ಕುರಿಯ ಸ್ಮೃತಿ ಗೌರವ’ ನೀಡಿ ಸಂಮಾನಿಸಲಾಗುವುದು.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ.ಶ್ಯಾಮ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರಿನ ದ್ವಾರಕಾ ಕಾರ್ಪೋರೇಶನ್ ಪ್ರೈ ಲಿ., ಇದರ ವ್ಯವಸ್ಥಾಪನಾ ನಿರ್ದೇಶಕ  ಗೋಪಾಲಕೃಷ್ಣ ಭಟ್ ಮುಖ್ಯ ಅಭ್ಯಾಗತರಾಗಿ ಉಪಸ್ಥಿತಿ. ಕೀರ್ತಿಶೇಷ ಹಾಸ್ಯಗಾರ ಪೆರುವಡಿ ನಾರಾಯಣ ಭಟ್ಟರ ಸಂಸ್ಮರಣೆಯನ್ನು ಹಿರಿಯ ಆರ್ಥದಾರಿ  ವೆಂಕಟರಾಮ ಭಟ್ ಸುಳ್ಯ ಮಾಡಲಿದ್ದಾರೆ.

ಜೂನ್ 30ರಿಂದ ಜುಲೈ 6 ರನಕ ಅನುಕ್ರಮವಾಗಿ “ತರಣಿಸೇನ ಕಾಳಗ, ಶಲ್ಯ ಸಾರಥ್ಯ, ದಕ್ಷಾಧ್ವರ, ದಮಯಂತಿ ಪುನಃ ಸ್ವಯಂವರ, ಕೃಷ್ಣಾರ್ಜುನ ಕಾಳಗ, ವಾಲಿ ವಧೆ, ಗುರುದಕ್ಷಿಣೆ” ಪ್ರಸಂಗಗಳ ತಾಳಮದ್ದಳೆ ಜರುಗಲಿದೆ. ಎಲ್ಲಾ ಕಲಾಭಿಮಾನಿಗಳಿಗೆ ಮುಕ್ತ ಪ್ರವೇಶ ಇದೆ ಎಂದು ಕುರಿಯ ವಿಠಲಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ ಭಟ್ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

8 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

15 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

22 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

22 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

22 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

22 hours ago