ವಳಲಂಬೆಯಲ್ಲಿ ಪಾವಂಜೆ ಮೇಳದ ಯಕ್ಷಗಾನ | ಹಿರಿಯ ಯಕ್ಷಗಾನ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರಿಗೆ ಗೌರವಾರ್ಪಣೆ

April 10, 2023
1:14 PM

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ – ಗುತ್ತಿಗಾರು ಇವರ ವತಿಯಿಂದ  ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಭಾನುವಾರ ನಾಗವೃಜ ಕ್ಷೇತ್ರ ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಶ್ರೀದೇವಿಲಲಿತೋಪಾಖ್ಯಾನ  ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ಇದೇ ಸಂದರ್ಭದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರ ವತಿಯಿಂದ ಹಿರಿಯ ಯಕ್ಷಗಾನ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರನ್ನು ಸನ್ಮಾನಿಸಲಾಯಿತು. 

Advertisement
Advertisement

ಇದೇ ವೇಳೆ ಪಾವಂಜೆ ಮೇಳದ ಮುಖ್ಯಸ್ಥರು ಹಾಗೂ ಖ್ಯಾತ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರನ್ನು ಗೌರವಿಸಲಾಯಿತು. ಕೃತಕ ಕಾಲಿನಿಂದಲೇ ಯಕ್ಷಗಾನ ರಂಗದಲ್ಲಿ ಮಿಂಚುತ್ತಿರುವ ಪಾವಂಜೆ ಮೇಳದ ಕಲಾವಿದ ಮನೋಜ್ ವೇಣೂರು ಅವರನ್ನು ಗುರುತಿಸಲಾಯಿತು. ಇದೇ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಟ್ರಸ್ಟ್‌ಗೆ ಸಂಘಟಕರ ವತಿಯಿಂದ ಧನಸಹಾಯ ಹಸ್ತಾಂತರಿಸಲಾಯಿತು. ವೆಂಕಟೇಶ್ ಪುಚ್ಛಪ್ಪಾಡಿ ಇದನ್ನು ಹಸ್ತಾಂತರಿಸಿದರು.

ಅಗಲಿದ ಬಲಿಪ ನಾರಾಯಣ ಭಾಗವತರಿಗೆ ಡಾ. ವಿಷ್ಣುಪ್ರಸನ್ನ ಬರಕೆರೆ ಅವರು ನುಡಿನಮನ ಸಲ್ಲಿಸಿದರು.

Advertisement

ಈ ಸಂದರ್ಭ ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ, ಸಂಘಟಕರಾದ ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ, ಗಂಗಾಧರ ಪುಚ್ಚಪ್ಪಾಡಿ, ಸತ್ಯನಾರಾಯಣ ಹೊನ್ನಡಿ, ಸತ್ಯನಾರಾಯಣ ಮಾತೃಮಜಲು, ಕೃಷ್ಣ ಭಟ್ ಹೊನ್ನಡಿ , ಮಹೇಶ್ ಪುಚ್ಛಪ್ಪಾಡಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಪರ್ಣಾ ಪುಚ್ಛಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…
July 28, 2025
3:01 PM
by: ದ ರೂರಲ್ ಮಿರರ್.ಕಾಂ
ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group