ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ – ಗುತ್ತಿಗಾರು ಇವರ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಭಾನುವಾರ ನಾಗವೃಜ ಕ್ಷೇತ್ರ ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಶ್ರೀದೇವಿಲಲಿತೋಪಾಖ್ಯಾನ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ಇದೇ ಸಂದರ್ಭದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರ ವತಿಯಿಂದ ಹಿರಿಯ ಯಕ್ಷಗಾನ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರನ್ನು ಸನ್ಮಾನಿಸಲಾಯಿತು.
ಇದೇ ವೇಳೆ ಪಾವಂಜೆ ಮೇಳದ ಮುಖ್ಯಸ್ಥರು ಹಾಗೂ ಖ್ಯಾತ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರನ್ನು ಗೌರವಿಸಲಾಯಿತು. ಕೃತಕ ಕಾಲಿನಿಂದಲೇ ಯಕ್ಷಗಾನ ರಂಗದಲ್ಲಿ ಮಿಂಚುತ್ತಿರುವ ಪಾವಂಜೆ ಮೇಳದ ಕಲಾವಿದ ಮನೋಜ್ ವೇಣೂರು ಅವರನ್ನು ಗುರುತಿಸಲಾಯಿತು. ಇದೇ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಟ್ರಸ್ಟ್‌ಗೆ ಸಂಘಟಕರ ವತಿಯಿಂದ ಧನಸಹಾಯ ಹಸ್ತಾಂತರಿಸಲಾಯಿತು. ವೆಂಕಟೇಶ್ ಪುಚ್ಛಪ್ಪಾಡಿ ಇದನ್ನು ಹಸ್ತಾಂತರಿಸಿದರು.
ಅಗಲಿದ ಬಲಿಪ ನಾರಾಯಣ ಭಾಗವತರಿಗೆ ಡಾ. ವಿಷ್ಣುಪ್ರಸನ್ನ ಬರಕೆರೆ ಅವರು ನುಡಿನಮನ ಸಲ್ಲಿಸಿದರು.
ಈ ಸಂದರ್ಭ ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ, ಸಂಘಟಕರಾದ ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ, ಗಂಗಾಧರ ಪುಚ್ಚಪ್ಪಾಡಿ, ಸತ್ಯನಾರಾಯಣ ಹೊನ್ನಡಿ, ಸತ್ಯನಾರಾಯಣ ಮಾತೃಮಜಲು, ಕೃಷ್ಣ ಭಟ್ ಹೊನ್ನಡಿ , ಮಹೇಶ್ ಪುಚ್ಛಪ್ಪಾಡಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಪರ್ಣಾ ಪುಚ್ಛಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…