Advertisement
ಸುದ್ದಿಗಳು

ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರದಾನ ಸಮಾರಂಭ

Share

ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರ 2019ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ ಪುರಸ್ಕೃತರಿಗೆ ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಧಾನ ಸಮಾರಂಭವು ನವೆಂಬರ್ 8ರಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕಲಾಭವನ ಮಂಗಳೂರಿನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕ್ರತಿ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಸಿ.ಟಿ.ರವಿ ಉದ್ಘಾಟಿಸಿ, ಗೌರವ ಪ್ರಶಸ್ತಿ ಪ್ರದಾನ ಮಾಡಲಿದ್ದು, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಪ್ರದಾನವನ್ನು ಮುಜರಾಯಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನವನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲು, ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ಬೆಂಗಳೂರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರ ದಿವಾಕರ್ ಪಾಂಡೇಶ್ವರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್‍ಸಾರ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ರಾಜೇಶ್ ಜಿ ಭಾಗವಹಿಸಲಿರುವರು.

ಕಾರ್ಯಕ್ರಮದಲ್ಲಿ 2019ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕ್ರತರು ಡಾ.ಚಂದ್ರಶೇಖರ್ ದಾಮ್ಲೆ, ಯಕ್ಷಸಿರಿ ಪ್ರಶಸ್ತಿ ಪುರಸ್ಕ್ರತ ಉಬರಡ್ಕ ಉಮೇಶ್ ಶೆಟ್ಟಿ, ಕುರಿಯ ಗಣಪತಿ ಶಾಸ್ತ್ರಿ ಹಾಗೂ ಪುಸ್ತಕ ಬಹುಮಾನ ಪುರಸ್ಕೃತ ಹೊಸ್ತೋಟ ಮಂಜುನಾಥ ಭಾಗವತ, ಶ್ರೀ ಗುರುದೇವ ಪ್ರಕಾಶನ ಒಡಿಯೂರು ಮತ್ತು ಕೃಷ್ಣಪ್ರಕಾಶ ಉಳಿತ್ತಾಯ ಪ್ರಶಸ್ತಿಗಳ ಗೌರವವನ್ನು ಪಡೆಯಲಿದ್ದಾರೆ ಎಂದು ಅಕಾಡೆಮಿಯ ಪ್ರಕಟಣೆಯು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

10 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

10 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

10 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

10 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago