ಯಶಸ್ವಿನಿ ಯೋಜನೆಯ ನೋಂದಣಿ ದಿನಾಂಕ ವಿಸ್ತರಣೆ : ನೋಂದಣಿಗೆ ಮತ್ತೆ ಅವಕಾಶ

March 10, 2023
1:55 PM

ಯಶಸ್ವಿನಿ ಯೋಜನೆಯ ನೋಂದಣಿಗೆ ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು, ಮಾರ್ಚ್ 31 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಯೋಜನೆ ಅಡಿಯಲ್ಲಿ ಸರ್ಕಾರ 30 ಲಕ್ಷ ಸದಸ್ಯರನ್ನು ನೋಂದಣಿ ಮಾಡುವ ಗುರಿ ಹೊಂದಿದೆ.

Advertisement
Advertisement

ಯಶಸ್ವಿನಿ ಯೋಜನೆ ಏನಿದು ..? : ಯಶಸ್ವಿನಿ ಗ್ರಾಮೀಣ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ. ಕರ್ನಾಟಕ ರಾಜ್ಯದ ಗ್ರಾಮೀಣ ಸಹಕಾರಿಗಳಿಗಾಗಿಯೇ ರೂಪಗೊಂಡಿರುವ ಒಂದು ಸ್ವಯಂ-ನಿಧಿ ಶಸ್ತ್ರಚಿಕಿತ್ಸಾ ಯೋಜನೆ. ಈ ಯೋಜನೆಯಡಿ ಗ್ರಾಮೀಣ ಸಹಕಾರಿಯೊಬ್ಬರು ತಿಂಗಳಿಗೆ ಇಂತಿಷ್ಟರಂತೆ ನಿಗಧಿತ ಪ್ರಮಾಣದಲ್ಲಿ ಒಂದು ವರ್ಷದ ಅವಧಿಯಲ್ಲಿ ಯೋಜನೆಯಲ್ಲಿ ಒಳಗೊಂಡ ಯಾವುದೇ ಶಸ್ತ್ರ ಚಿಕಿತ್ಸೆಯನ್ನು ನಿಗದಿತ ಮಿತಿಯೊಳಗೆ, ಷರತ್ತು ಮತ್ತು ನಿಯಮಗಳಿಗೆ ಒಳಪಟ್ಟು ಟ್ರಸ್ಟಿನಿಂದ ಅಂಗೀಕೃತ ಯಾವುದೇ ಆಸ್ಪತ್ರೆಗಳಲ್ಲಿ ನಗದುರಹಿತವಾಗಿ ಪಡೆಯಬಹುದು.

ಯೋಜನೆಯ ಫಲಾಭವಿಯಾಗಲು ಇರಬೇಕಾದ ಅರ್ಹತೆಗಳೇನು ? : ಈ ಯೋಜನೆಯ ಫಲಾನುಭವಿಯಾಗಲು ಕನಿಷ್ಟ 3 ತಿಂಗಳು ಮುಂಚಿತ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಅಲ್ಲದೇ ಗ್ರಾಮೀಣ ಸಹಕಾರ ಸಂಘ/ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು .

ಯಶಸ್ವಿನಿ ಸದಸ್ಯರಾಗಲು ಸಹಕಾರ ಕುಟುಂಬದ ಎಲ್ಲಾ ಸದಸ್ಯರು ಸದಸ್ಯತ್ವವನ್ನು ಹೊಂದಿರಬೇಕೆ ? : ಕುಟುಂಬದ ಯಾವುದೇ ಒಬ್ಬ ಸದಸ್ಯನು/ಸದಸ್ಯಳು ಮೇಲೆ ತಿಳಿಸಿರುವ ಅರ್ಹ ಸಹಕಾರ ಸಂಘದ ಸದಸ್ಯನಾಗಿ/ಳಾಗಿ ಯಶಸ್ವಿನಿ ವರ್ಷದ ಮೊದಲ ದಿನ ಅಂದರೆ 01.06.2024ಕ್ಕೆ ಮೂರು ತಿಂಗಳಾಗಿದ್ದಲ್ಲಿ, ಕುಟುಂಬದ ಪ್ರತಿಯೊಬ್ಬ ಸದಸ್ಯನೂ ನಿಗದಿತ ಅವಧಿಯಲ್ಲಿ ವಾರ್ಷಿಕ ವಂತಿಗೆ ಸಲ್ಲಿಸುವ ಮೂಲಕ ಯಶಸ್ವಿನಿ ಯೋಜನೆಯ ಸೌಲಭ್ಯ ಪಡೆಯಬಹುದು.

ಫಲಾನುಭವಿತ್ವ ಬಯಸುವವರು ಪಾವತಿಸಬೇಕಾದ ವಂತಿಗೆ ಹಣ ಎಷ್ಟು ? : ಫಲಾನುಭವಿಯಾಗಬಯಸುವ ಪ್ರತಿಯೊಬ್ಬರೂ ವರ್ಷಕ್ಕೆ ನಿಗದಿತ ಪ್ರಮಾಣದ ವಂತಿಗೆ ಹಣ ನೀಡಬೇಕು. ವಾರ್ಷಿಕ ವಂತಿಗೆ ರೂ.250/- ಆಗಿರುತ್ತದೆ.ಒಂದೇ ಕುಟುಂಬದ 5 ಅಥವಾ 5 ಕ್ಕಿಂತ ಹೆಚ್ಚು ಸದಸ್ಯರು ನೊಂದಣಿಯಾದಲ್ಲಿ ವಂತಿಗೆಯಲ್ಲಿ ಶೇ.15 ರಿಯಾಯಿತಿ ಇರುತ್ತದೆ .

Advertisement

ಶಸ್ತ್ರಚಿಕಿತ್ಸೆ ಪಡೆದ ಫಲಾನುಭವಿಗಳ ಬಿಲ್ಲಿನ ಪಾವತಿ ಹೇಗೆ ಆಗುತ್ತದೆ ?: ಯಶಸ್ವಿನಿ ಫಲಾನುಭವಿಗಳು,  ಆಸ್ಪತ್ರೆ ಬಿಲ್ಲಿನ ಹಣವನ್ನು ಪಾವತಿ ಮಾಡಬೇಕಾಗಿಲ್ಲ. ಆಸ್ಪತ್ರೆಯವರು ಚಿಕಿತ್ಸಾ ಪೂರ್ವಾನುಮತಿಯಲ್ಲಿ ಮಂಜೂರು ಮಾಡಿದ ಮೊತ್ತಕ್ಕೆ ಬಿಲ್ಲನ್ನು ಅನುಷ್ಟಾನ ಸಂಸ್ಥೆಗೆ ಕಳಿಸುವರು. ಅನುಷ್ಟಾನ ಸಂಸ್ಥೆ ಯವರು ಬಿಲ್ಲನ್ನು ಪರಿಶೀಲನೆ ಮಾಡಿ ಅವು ಯೋಜನೆಯ ಪ್ರಕಾರ ಇದ್ದಲ್ಲಿ ಅವುಗಳನ್ನು ಪಾಸು ಮಾಡಲು ಯಶಸ್ವಿನಿ ಟ್ರಸ್ಟಗೆ ಕಳಿಸುವರು. ಯಶಸ್ವಿನಿ ಟ್ರಸ್ಟ್ ಆಸ್ಪತ್ರೆಗಳ ಬಿಲ್ಲನ್ನು ಮಂಜೂರು ಮಾಡಿದ ನಂತರ ಬಿಲ್ಲಿನ ಮೊತ್ತವನ್ನು ಅನುಷ್ಟಾನ ಸಂಸ್ಥೆಯ ಮೂಲಕ ಆಸ್ಪತ್ರೆಗೆ ಪಾವತಿಸಲಾಗುವುದು

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group