ಯಶಸ್ವಿನಿ ಯೋಜನೆಯ ನೋಂದಣಿಗೆ ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು, ಮಾರ್ಚ್ 31 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಯೋಜನೆ ಅಡಿಯಲ್ಲಿ ಸರ್ಕಾರ 30 ಲಕ್ಷ ಸದಸ್ಯರನ್ನು ನೋಂದಣಿ ಮಾಡುವ ಗುರಿ ಹೊಂದಿದೆ.
ಯಶಸ್ವಿನಿ ಯೋಜನೆ ಏನಿದು ..? : ಯಶಸ್ವಿನಿ ಗ್ರಾಮೀಣ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ. ಕರ್ನಾಟಕ ರಾಜ್ಯದ ಗ್ರಾಮೀಣ ಸಹಕಾರಿಗಳಿಗಾಗಿಯೇ ರೂಪಗೊಂಡಿರುವ ಒಂದು ಸ್ವಯಂ-ನಿಧಿ ಶಸ್ತ್ರಚಿಕಿತ್ಸಾ ಯೋಜನೆ. ಈ ಯೋಜನೆಯಡಿ ಗ್ರಾಮೀಣ ಸಹಕಾರಿಯೊಬ್ಬರು ತಿಂಗಳಿಗೆ ಇಂತಿಷ್ಟರಂತೆ ನಿಗಧಿತ ಪ್ರಮಾಣದಲ್ಲಿ ಒಂದು ವರ್ಷದ ಅವಧಿಯಲ್ಲಿ ಯೋಜನೆಯಲ್ಲಿ ಒಳಗೊಂಡ ಯಾವುದೇ ಶಸ್ತ್ರ ಚಿಕಿತ್ಸೆಯನ್ನು ನಿಗದಿತ ಮಿತಿಯೊಳಗೆ, ಷರತ್ತು ಮತ್ತು ನಿಯಮಗಳಿಗೆ ಒಳಪಟ್ಟು ಟ್ರಸ್ಟಿನಿಂದ ಅಂಗೀಕೃತ ಯಾವುದೇ ಆಸ್ಪತ್ರೆಗಳಲ್ಲಿ ನಗದುರಹಿತವಾಗಿ ಪಡೆಯಬಹುದು.
ಯೋಜನೆಯ ಫಲಾಭವಿಯಾಗಲು ಇರಬೇಕಾದ ಅರ್ಹತೆಗಳೇನು ? : ಈ ಯೋಜನೆಯ ಫಲಾನುಭವಿಯಾಗಲು ಕನಿಷ್ಟ 3 ತಿಂಗಳು ಮುಂಚಿತ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಅಲ್ಲದೇ ಗ್ರಾಮೀಣ ಸಹಕಾರ ಸಂಘ/ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು .
ಯಶಸ್ವಿನಿ ಸದಸ್ಯರಾಗಲು ಸಹಕಾರ ಕುಟುಂಬದ ಎಲ್ಲಾ ಸದಸ್ಯರು ಸದಸ್ಯತ್ವವನ್ನು ಹೊಂದಿರಬೇಕೆ ? : ಕುಟುಂಬದ ಯಾವುದೇ ಒಬ್ಬ ಸದಸ್ಯನು/ಸದಸ್ಯಳು ಮೇಲೆ ತಿಳಿಸಿರುವ ಅರ್ಹ ಸಹಕಾರ ಸಂಘದ ಸದಸ್ಯನಾಗಿ/ಳಾಗಿ ಯಶಸ್ವಿನಿ ವರ್ಷದ ಮೊದಲ ದಿನ ಅಂದರೆ 01.06.2024ಕ್ಕೆ ಮೂರು ತಿಂಗಳಾಗಿದ್ದಲ್ಲಿ, ಕುಟುಂಬದ ಪ್ರತಿಯೊಬ್ಬ ಸದಸ್ಯನೂ ನಿಗದಿತ ಅವಧಿಯಲ್ಲಿ ವಾರ್ಷಿಕ ವಂತಿಗೆ ಸಲ್ಲಿಸುವ ಮೂಲಕ ಯಶಸ್ವಿನಿ ಯೋಜನೆಯ ಸೌಲಭ್ಯ ಪಡೆಯಬಹುದು.
ಫಲಾನುಭವಿತ್ವ ಬಯಸುವವರು ಪಾವತಿಸಬೇಕಾದ ವಂತಿಗೆ ಹಣ ಎಷ್ಟು ? : ಫಲಾನುಭವಿಯಾಗಬಯಸುವ ಪ್ರತಿಯೊಬ್ಬರೂ ವರ್ಷಕ್ಕೆ ನಿಗದಿತ ಪ್ರಮಾಣದ ವಂತಿಗೆ ಹಣ ನೀಡಬೇಕು. ವಾರ್ಷಿಕ ವಂತಿಗೆ ರೂ.250/- ಆಗಿರುತ್ತದೆ.ಒಂದೇ ಕುಟುಂಬದ 5 ಅಥವಾ 5 ಕ್ಕಿಂತ ಹೆಚ್ಚು ಸದಸ್ಯರು ನೊಂದಣಿಯಾದಲ್ಲಿ ವಂತಿಗೆಯಲ್ಲಿ ಶೇ.15 ರಿಯಾಯಿತಿ ಇರುತ್ತದೆ .
ಶಸ್ತ್ರಚಿಕಿತ್ಸೆ ಪಡೆದ ಫಲಾನುಭವಿಗಳ ಬಿಲ್ಲಿನ ಪಾವತಿ ಹೇಗೆ ಆಗುತ್ತದೆ ?: ಯಶಸ್ವಿನಿ ಫಲಾನುಭವಿಗಳು, ಆಸ್ಪತ್ರೆ ಬಿಲ್ಲಿನ ಹಣವನ್ನು ಪಾವತಿ ಮಾಡಬೇಕಾಗಿಲ್ಲ. ಆಸ್ಪತ್ರೆಯವರು ಚಿಕಿತ್ಸಾ ಪೂರ್ವಾನುಮತಿಯಲ್ಲಿ ಮಂಜೂರು ಮಾಡಿದ ಮೊತ್ತಕ್ಕೆ ಬಿಲ್ಲನ್ನು ಅನುಷ್ಟಾನ ಸಂಸ್ಥೆಗೆ ಕಳಿಸುವರು. ಅನುಷ್ಟಾನ ಸಂಸ್ಥೆ ಯವರು ಬಿಲ್ಲನ್ನು ಪರಿಶೀಲನೆ ಮಾಡಿ ಅವು ಯೋಜನೆಯ ಪ್ರಕಾರ ಇದ್ದಲ್ಲಿ ಅವುಗಳನ್ನು ಪಾಸು ಮಾಡಲು ಯಶಸ್ವಿನಿ ಟ್ರಸ್ಟಗೆ ಕಳಿಸುವರು. ಯಶಸ್ವಿನಿ ಟ್ರಸ್ಟ್ ಆಸ್ಪತ್ರೆಗಳ ಬಿಲ್ಲನ್ನು ಮಂಜೂರು ಮಾಡಿದ ನಂತರ ಬಿಲ್ಲಿನ ಮೊತ್ತವನ್ನು ಅನುಷ್ಟಾನ ಸಂಸ್ಥೆಯ ಮೂಲಕ ಆಸ್ಪತ್ರೆಗೆ ಪಾವತಿಸಲಾಗುವುದು
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…