ರೈತರು/ಸಹಕಾರಿ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭವಾಗಲಿದೆ. ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆ ಜನವರಿ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸಹಕಾರ ಸಂಘಗಳ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ಲಾಭ ದೊರೆಯಲಿದೆ.
ರಾಜ್ಯದ ಸಹಕಾರಿ ಸಂಘದ ಸದಸ್ಯರು ತಮ್ಮ ಸಹಕಾರಿ ಸಂಘಗಳ ಮೂಲಕ ನಿಗದಿತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು.ನೋಂದಣಿ ಮಾಡಿಕೊಂಡ ನಂತರ ಸಹಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ನೆಟ್ ವರ್ಕ್ ವ್ಯಾಪ್ತಿಯ ಯಾವುದೇ ಆಸ್ಪತ್ರೆಯಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷ ರೂ.ವರೆಗೆ ಚಿಕಿತ್ಸೆ ಪಡೆಯಬಹುದು.
ಸದಸ್ಯರಿಗೆ 2023 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿ ನಂತರ ಮತ್ತೆ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…