ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ ಚಿಕಿತ್ಸೆಯನ್ನು ಪಡೆಯಲು ಕಷ್ಟಕರ. ಇಂತಹವರಿಗಾಗಿ ರಾಜ್ಯ ಸರ್ಕಾರವು ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ಅಲ್ಪ ಶುಲ್ಕದಲ್ಲಿ ದೊಡ್ಡ ಮಟ್ಟದ ಚಿಕಿತ್ಸೆ ಒಡೆಯುವ ಅವಕಾಶವನ್ನು ಆರ್ಹರು ತಪ್ಪದೇ ಬಳಸಿಕೊಳ್ಳಬಹುದು. ಇದೀಗ ಯಶಸ್ವಿನಿ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಅರ್ಜಿ ಸಲ್ಲಿಸಲು ಜನವರಿ 3, 2026 ರಿಂದ 31 ಮಾರ್ಚ್ 2026 ರವರೆಗೆ ದಿನಾಂಕ ಸೂಚಿಸಿದೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಪಾಸ್ ಪೋರ್ಟ್ ಫೋಟೋ
• ಬ್ಯಾಂಕ್ ಪಾಸ್ ಬುಕ್
• ರೇಷನ್ ಕಾರ್ಡ್
• ಸಕ್ರಿಯ ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವ ಸ್ಥಳ: ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘ/ ಸಹಕಾರಿ ಸೊಸೈಟಿ, ಹಾಲು ಉತ್ಪಾದಕರ ಸಹಕಾರಿ ಸಂಘ (ಡೈರಿ) ಈ ಕಚೇರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಭೇಟಿ ನೀಡಿ ನೋಂದಣಿ ಮಾಡಿಸಬೇಕು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

