ಬಯಲುಸೀಮೆಯ ಜಿಲ್ಲೆಗಳಿಗೆ ನೀರುಣಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದೊಳಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಅವರು, ತುಮಕೂರಿನ ಕೊರಟಗೆರೆ ಹಾಗೂ ದೊಡ್ಡಬಳ್ಳಾಪುರದ ಸಾಸಲು ಹೋಬಳಿ ಹಾಗೂ ಕುಂದಾಣದ ಬಳಿ ನೀರು ಶೇಖರಣೆ ಆಗಲಿದೆ, ಅಲ್ಲಿಂದ ನೀರನ್ನು ಪಂಪ್ ಮಾಡಲಾಗುತ್ತದೆ ಎಂದರು. ಜಿಲ್ಲೆಯ ಈ ಭಾಗಕ್ಕೆ ಕೆ.ಸಿ ವ್ಯಾಲಿ, ಎಚ್‌ಎನ್ ವ್ಯಾಲಿ, ಎತ್ತಿನಹೊಳೆ ನೀರು ಬರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ಕೃಷಿ ಚಟುವಟಿಕೆ ಕೈಗೊಳ್ಳಲು ಸಹಾಯಕವಾಗಲಿದೆ ಎಂದು ಸಚಿವರು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

