ಆಮ್‌ ಆದ್ಮಿ ಪಕ್ಷ ಸೇರಿದ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ಮೊಮ್ಮಗಳು ಧರ್ಮಶ್ರೀ |

April 12, 2022
4:11 PM

ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ಅವರ ಮೊಮ್ಮಗಳು, ನಿವೃತ್ತ ಪೊಲೀಸ್‌ ಅಧಿಕಾರಿ ಸಂಗ್ರಾಮ್‌ ಸಿಂಗ್‌ ಅವರ ಪುತ್ರಿ ಯುವ ಉದ್ಯಮಿ ಧರ್ಮಶ್ರೀ ಅವರು ಮೈಸೂರಿನಲ್ಲಿ ಸೋಮವಾರ ಆಮ್‌ ಆದ್ಮಿ ಪಾರ್ಟಿ ಸೇರ್ಪಡೆಯಾದರು. ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಧರ್ಮಶ್ರೀ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭ ಮಾತನಾಡಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಧರ್ಮಶ್ರೀ, ರಾಜ್ಯದಲ್ಲಿ ಅಭಿವೃದ್ಧಿ ಆಧಾರಿತ ರಾಜಕಾರಣ ಬೆಳೆಯಬೇಕಿದೆ. ಜಾತಿ, ಧರ್ಮಾಧಾರಿತ ರಾಜಕಾರಣಿ ಸಾಕಾಗಿದೆ. ದೆಹಲಿ ಮಾದರಿಯಲ್ಲಿ ರಾಜ್ಯವನ್ನೂ ಅಭಿವೃದ್ಧಿ ಮಾಡಲು ಸಾಧ್ಯವಿದೆ ಎಂದರು.

ಈ ಸಂದರ್ಭ ಎಎಪಿ ಮೈಸೂರು ಜಿಲ್ಲಾ ಅಧ್ಯಕ್ಷೆ ಮಾಲವಿಕಾ,ಕಾರ್ಯದರ್ಶಿ ವಿಜಯ ಶಾಸ್ತ್ರಿ ‌,ಮಾಧ್ಯಮ ಸಂಚಾಲಕ ವಿದ್ಯಾರಣ್ಯ  ಇದ್ದರು.

ಕಾನೂನು ಪದವೀಧರರಾಗಿರುವ ಧರ್ಮಶ್ರೀ ಅವರು ಯಶಸ್ವಿ ಉದ್ಯಮಿ.  ಫೋಯಲ್ ಆನ್ ವೀಲ್, ಸಂಗ್ರಾಮ್ ಸರ್ವಿಸಸ್ ಸಂಸ್ಥೆಗಳನ್ನು ಹೊಂದಿದ್ದಾರೆ. ರಿಲಯನ್ಸ್ ಗ್ರೂಪ್‌ನಿಂದ ಯುವ ಉದ್ಯಮಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಲಯನ್ಸ್ ಕ್ಲಬ್ ಮೂಲಕ ಸರ್ಕಾರಿ ಶಾಲೆಗಳಲ್ಲಿ ಹಲವಾರು ಸೇವಾ ಚಟುವಟಿಕೆಗಳನ್ನು ಕೈಗೊಂಡಿದ್ದಾರೆ. ಜತೆಗೆ ರಾಜೀವ್ ನಗರದ ನಿವಾಸಿಗಳಿಗೆ ಉಚಿತ ಕಾನೂನು ನೆರವು ನೀಡುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror