ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಮೊಮ್ಮಗಳು, ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಅವರ ಪುತ್ರಿ ಯುವ ಉದ್ಯಮಿ ಧರ್ಮಶ್ರೀ ಅವರು ಮೈಸೂರಿನಲ್ಲಿ ಸೋಮವಾರ ಆಮ್ ಆದ್ಮಿ ಪಾರ್ಟಿ ಸೇರ್ಪಡೆಯಾದರು. ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಧರ್ಮಶ್ರೀ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಮಾತನಾಡಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಧರ್ಮಶ್ರೀ, ರಾಜ್ಯದಲ್ಲಿ ಅಭಿವೃದ್ಧಿ ಆಧಾರಿತ ರಾಜಕಾರಣ ಬೆಳೆಯಬೇಕಿದೆ. ಜಾತಿ, ಧರ್ಮಾಧಾರಿತ ರಾಜಕಾರಣಿ ಸಾಕಾಗಿದೆ. ದೆಹಲಿ ಮಾದರಿಯಲ್ಲಿ ರಾಜ್ಯವನ್ನೂ ಅಭಿವೃದ್ಧಿ ಮಾಡಲು ಸಾಧ್ಯವಿದೆ ಎಂದರು.
ಈ ಸಂದರ್ಭ ಎಎಪಿ ಮೈಸೂರು ಜಿಲ್ಲಾ ಅಧ್ಯಕ್ಷೆ ಮಾಲವಿಕಾ,ಕಾರ್ಯದರ್ಶಿ ವಿಜಯ ಶಾಸ್ತ್ರಿ ,ಮಾಧ್ಯಮ ಸಂಚಾಲಕ ವಿದ್ಯಾರಣ್ಯ ಇದ್ದರು.
ಕಾನೂನು ಪದವೀಧರರಾಗಿರುವ ಧರ್ಮಶ್ರೀ ಅವರು ಯಶಸ್ವಿ ಉದ್ಯಮಿ. ಫೋಯಲ್ ಆನ್ ವೀಲ್, ಸಂಗ್ರಾಮ್ ಸರ್ವಿಸಸ್ ಸಂಸ್ಥೆಗಳನ್ನು ಹೊಂದಿದ್ದಾರೆ. ರಿಲಯನ್ಸ್ ಗ್ರೂಪ್‌ನಿಂದ ಯುವ ಉದ್ಯಮಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಲಯನ್ಸ್ ಕ್ಲಬ್ ಮೂಲಕ ಸರ್ಕಾರಿ ಶಾಲೆಗಳಲ್ಲಿ ಹಲವಾರು ಸೇವಾ ಚಟುವಟಿಕೆಗಳನ್ನು ಕೈಗೊಂಡಿದ್ದಾರೆ. ಜತೆಗೆ ರಾಜೀವ್ ನಗರದ ನಿವಾಸಿಗಳಿಗೆ ಉಚಿತ ಕಾನೂನು ನೆರವು ನೀಡುತ್ತಿದ್ದಾರೆ.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…