ಬ್ರಹ್ಮಾವರದಲ್ಲಿ ಮುತ್ತು ಕೃಷಿ ಮಾಹಿತಿ  ಕಾರ್ಯಾಗಾರ | ಯುವಕರು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಬೇಕು |

October 1, 2024
9:07 PM

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ಮುತ್ತು ಕೃಷಿಯನ್ನು ಯಾರು ಬೇಕಾದರೂ ಮಾಡಬಹುದು ಎಂದು ಕೋಟಾ ಗೀತಾನಂದ ಪ್ರತಿಷ್ಠಾನದ ಅಧ್ಯಕ್ಷ ಆನಂದ್ ಕುಂದರ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಉಡುಪಿಯ ಕೃಷಿ ವಿಜ್ಞಾನ ಕೇಂದ್ರದ ಬ್ರಹ್ಮಾವರದಲ್ಲಿ “ಮುತ್ತು ಕೃಷಿ ಮಾಹಿತಿ  ಕಾರ್ಯಾಗಾರ”ಕ್ಕೆ  ಚಾಲನೆ ನೀಡಿ ಅವರು ಮಾತನಾಡಿದರು.

ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರವಿ,  ಮುತ್ತು ಕೃಷಿ ಲಾಭದಾಯಕವಾಗಿದ್ದು ಕೃಷಿಕರು ಈ ಮಾದರಿಯ ಕೃಷಿಯನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್, ಬ್ಯಾಂಕಿನಿಂದ ಸಾಲ ಪಡೆದು ಜನರು ಉದ್ಯಮ ಆರಂಭಿಸಬೇಕು. ಇದಕ್ಕೆ ಬ್ಯಾಂಕ್ ಗಳಿಂದ ಸಾಲಸೌಲಭ್ಯ ದೊರೆಯಲಿದೆ ಎಂದು ಹೇಳಿದರು.

ಹಿರಿಯ ವಿಜ್ಞಾನಿ ಧನಂಜಯ್, ಇತರೆ ಕೃಷಿ ಚಟುವಟಿಕೆಗಳೊಂದಿಗೆ ಮುತ್ತು ಕೃಷಿಯನ್ನು ರೈತರು ಮಿಶ್ರ ಕೃಷಿಯಾಗಿ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು ಎಂದರು.

ಈ ವೇಳೆ  ಕೆ.ವಿ.ಕೆ ಮುಖ್ಯಸ್ಥ ಹಿರಿಯ ವಿಜ್ಞಾನಿ ಧನಂಜಯ್, ಮುತ್ತು ಕೃಷಿಕರಾದ ಸುಳ್ಯದ ನವೀನ್ ಚಂದ್ರ, ಬೆಂಗಳೂರಿನ ಪ್ರಜ್ವಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್
ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror