ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ಮುತ್ತು ಕೃಷಿಯನ್ನು ಯಾರು ಬೇಕಾದರೂ ಮಾಡಬಹುದು ಎಂದು ಕೋಟಾ ಗೀತಾನಂದ ಪ್ರತಿಷ್ಠಾನದ ಅಧ್ಯಕ್ಷ ಆನಂದ್ ಕುಂದರ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಉಡುಪಿಯ ಕೃಷಿ ವಿಜ್ಞಾನ ಕೇಂದ್ರದ ಬ್ರಹ್ಮಾವರದಲ್ಲಿ “ಮುತ್ತು ಕೃಷಿ ಮಾಹಿತಿ ಕಾರ್ಯಾಗಾರ”ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರವಿ, ಮುತ್ತು ಕೃಷಿ ಲಾಭದಾಯಕವಾಗಿದ್ದು ಕೃಷಿಕರು ಈ ಮಾದರಿಯ ಕೃಷಿಯನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್, ಬ್ಯಾಂಕಿನಿಂದ ಸಾಲ ಪಡೆದು ಜನರು ಉದ್ಯಮ ಆರಂಭಿಸಬೇಕು. ಇದಕ್ಕೆ ಬ್ಯಾಂಕ್ ಗಳಿಂದ ಸಾಲಸೌಲಭ್ಯ ದೊರೆಯಲಿದೆ ಎಂದು ಹೇಳಿದರು.
ಹಿರಿಯ ವಿಜ್ಞಾನಿ ಧನಂಜಯ್, ಇತರೆ ಕೃಷಿ ಚಟುವಟಿಕೆಗಳೊಂದಿಗೆ ಮುತ್ತು ಕೃಷಿಯನ್ನು ರೈತರು ಮಿಶ್ರ ಕೃಷಿಯಾಗಿ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು ಎಂದರು.
ಈ ವೇಳೆ ಕೆ.ವಿ.ಕೆ ಮುಖ್ಯಸ್ಥ ಹಿರಿಯ ವಿಜ್ಞಾನಿ ಧನಂಜಯ್, ಮುತ್ತು ಕೃಷಿಕರಾದ ಸುಳ್ಯದ ನವೀನ್ ಚಂದ್ರ, ಬೆಂಗಳೂರಿನ ಪ್ರಜ್ವಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಂಭವನೀಯ ದಾಳಿಯ ಬಗ್ಗೆ…
ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…