ಮೂರು ಹಾವುಗಳೊಂದಿಗೆ ಆಟ ಆಡುತ್ತಿದ್ದ ಯುವಕ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದ. 3 ಸಾವಿರಕ್ಕೂ ಅಧಿಕ ಹಾವುಗಳ ರಕ್ಷಣೆ ಕೂಡ ಮಾಡಿದ್ದಾನೆ. ಆದರೆ ಈ ಬಾರಿ ಹಾವುಗಳ ಜೊತೆ ಸರಸವಾಡಿದ್ದಾನೆ. ಆಕಸ್ಮಿಕವಾಗಿ ಹಾವು ಕಚ್ಚಿದೆ.
ಶಿರಸಿಯ ಉರಗ ಪ್ರೇಮಿ ಮಾಝ್ ಸಯೀದ್ (20) ಹಾವಿನ ಕಡಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಯುವಕ. ದೇವಿಕೆರೆ ಕಾಡಿನಲ್ಲಿ ಈ ಘಟನೆ ಜರುಗಿದೆ. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 3 ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾನೆ. ವಿಡಿಯೋದಲ್ಲಿ ಕಾಣುವಂತೆ 3 ಹಾವುಗಳೊಂದಿಗೆ ಆಟ ಆಡುವಾಗ ಒಂದು ಹಾವು ಈತನ ಕಾಲಿಗೆ ಕಚ್ಚಿದೆ. ಘಟನೆ ಸಂಬಂಧ ಐಎಫ್ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಟ್ವೀಟ್ ಮಾಡಿದ್ದಾರೆ. ಈ ರೀತಿ ಹಾವುಗಳ ಜೊತೆ ಆಟವಾಡಬಾರದು ಎಂದು ಎಚ್ಚರಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…