Advertisement
ರಾಜ್ಯ

ಹದಗೆಟ್ಟ ಮಂಗಳೂರಿನ ರಸ್ತೆ | ComeBackModi ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟಿಸಿದ ಯುವಕ |

Share

ರಾಷ್ಟ್ರೀಯ ಹೆದ್ದಾರಿ 75 ರಸ್ತೆಯ ದುಃಸ್ಥಿತಿಗೆ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮಂಗಳೂರು (Mangalore) ನಗರದ ನಂತೂರು ವೃತ್ತದಲ್ಲಿ  ಯುವಕನೊಬ್ಬ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಪುತ್ತೂರಿನ ಲಿಖಿತ್ ರೈ ಎಂಬ ಯುವಕ ‘ಕಮ್ ಬ್ಯಾಕ್ ಮೋದಿ, ರೋಡ್ ವರ್ಕ್ ಸೀರ್ಫ್ ಮೋದಿ ಹೈ ತೋ ಮುಮ್ಕೀನ್ ಹೈ. ಪಾಟ್ ಹೋಲ್ ಸೇ ಆಜಾದಿ, ವಿ ಡಿಮ್ಯಾಂಡ್ ಸೇಫ್ ರೋಡ್ಸ್ ಎಂಬ ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು. ಈ ಸಂದರ್ಭ ಆಡಳಿತವು ಶೀಘ್ರವಾಗಿ ರಸ್ತೆ ಕಾಮಗಾರಿಯನ್ನು ಕೈಗೊಂಡಿತ್ತು. ಆದರೆ ಮೋದಿಯವರು  ತೆರಳಿದ  ಕೆಲವೇ ದಿನಗಳಲ್ಲಿ ಮತ್ತೆ ಗುಂಡಿ ಬಿದ್ದಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡಾ ಆಗಿದೆ. ಅದಾದ ಬಳಿಕ ಮತ್ತೆ ದುರಸ್ತಿ ಮಾಡಲಾಗಿದೆ. ಆದರೆ ರಸ್ತೆ ಹದಗೆಟ್ಟ ಸ್ಥಿತಿ ಇನ್ನೂ ಹಲವು ಕಡೆ ಇದೆ. ಇದಕ್ಕಾಗಿ  ನರೇಂದ್ರ ಮೋದಿಯವರು ಮತ್ತೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುವಂತೆ ಲಿಖಿತ್ ಮನವಿ ಮಾಡಿದ್ದಾರೆ. ಇದಕ್ಕಾಗಿ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಜಂಕ್ಷನ್ ನಂತೂರಿನಲ್ಲಿ ಅವರು ಒಂದು ಗಂಟೆಗಳ ಕಾಲ ಈ ಪ್ರತಿಭಟನೆ ನಡೆಸಿದ್ದರು.

ಇದೇ ಆಗಸ್ಟ್ 5 ರಂದು ಬಿಕರ್ನಕಟ್ಟೆ ಬಳಿ ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಪ್ರಾಣ ಕಳೆದುಕೊಂಡ ತನ್ನ ಕಾಲೇಜು ಸಹಪಾಠಿ ಆತಿಶ್‌ಗೆ ನ್ಯಾಯ ಕೋರಿ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕಚೇರಿ ಎದುರು ಯುವಕ ಲಿಖಿತ್ ರೈ ಪ್ರತಿಭಟನೆ ನಡೆಸಿದ್ದರು. ಅದಾದ ಬಳಿಕ ಮಂಗಳೂರು ಮಹಾನಗರ ಪಾಲಿಕೆ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡಿತ್ತು. ಇದೀಗ ಮತ್ತೆ ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಲಿಖಿತ್‌ ರೈ, ಹೆದ್ದಾರಿಯಲ್ಲಿ ಹಲವಾರು ಅಪಘಾತಗಳು ನಡೆಯುತ್ತಿವೆ. ರಸ್ತೆ ತೆರಿಗೆ ಕಟ್ಟುತ್ತಿರುವ ಪ್ರಯಾಣಿಕರಿಗೆ ಉತ್ತಮ ರಸ್ತೆ ಕಲ್ಪಿಸಲು ಚುನಾಯಿತ ಪ್ರತಿನಿಧಿಗಳು ಮುಂದಾಗಬೇಕು ಎಂದು ಆಗ್ರಹಿಸುತ್ತೇವೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಸ್ತೆಗಳನ್ನು ದುರಸ್ತಿ ಮಾಡಲಾಗಿತ್ತು. ಈಗ ರಸ್ತೆಗಳ ದಯನೀಯ ಸ್ಥಿತಿಯನ್ನು ತಿಳಿಯಲು ಪ್ರಧಾನಿಯವರು ಸಕಲೇಶಪುರದಿಂದ ಮಂಗಳೂರಿಗೆ ರಸ್ತೆ ಮಾರ್ಗವಾಗಿ ಪ್ರಯಾಣಿಸಬೇಕು ಎಂದರು. ಅಧಿಕಾರಿಗಳು ಹೆದ್ದಾರಿ ರಸ್ತೆಗಳಲ್ಲಿ ಸರಿಯಾದ ಬೀದಿ ದೀಪಗಳನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

8 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

10 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

16 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

17 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

18 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

19 hours ago