ಜಿಪಂ-ತಾಪಂ ಚುನಾವಣೆ | ಕ್ಷೇತ್ರ ವಿಂಗಡಣೆಯ ಪರಿಷ್ಕೃತ ಮಾರ್ಗಸೂಚಿಗೆ ಮನವಿ | ಶೀಘ್ರದಲ್ಲೇ ಚುನಾವಣೆ |

March 23, 2021
7:05 AM

ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಯು ಶೀಘ್ರದಲ್ಲೇ ನಡೆಯಲಿದೆ. ಮಾ.31 ರ ಮೊದಲು ಕ್ಷೇತ್ರಗಳ ವೈಜ್ಞಾನಿಕವಾಗಿ ಮರುವಿಂಗಡಣೆಗೆ ಸಭೆ ನಡೆಸಲಾಗುವುದು, ಕ್ಷೇತ್ರಗಳ  ವಿಂಗಡಣೆಗೆ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಗುರುವಾರ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಕಾರ್ಕಳ ಶಾಸಕ ಸುನೀಲ್‌ಕುಮಾರ್ ಈ  ವಿಷಯ ಪ್ರಸ್ತಾಪಿಸಿ, ಮುಂದೆ ಜಿಪಂ, ತಾಪಂ ಚುನಾವಣೆ ನಡೆಯಲಿದೆ. ಆದರೆ ಇಲ್ಲಿ ರಾಜ್ಯ ಚುನಾವಣಾ ಆಯೋಗ ಮಾಡಿರುವ  ಕ್ಷೇತ್ರಗಳ ಮರುವಿಂಗಡಣೆಯಲ್ಲಿ ಹಲವಾರು ವ್ಯತ್ಯಾಸಗಳಿವೆ, ಇದರಿಂದ ಅನ್ಯಾಯವಾಗುತ್ತದೆ ಎಂದು  ಸುನಿಲ್ ಕುಮಾರ್ ಸರಕಾರದ ಗಮನ ಸೆಳೆದರು.ಇದಕ್ಕೆ ಹಲವು ಶಾಸಕರು ದ್ವನಿಗೂಡಿಸಿದರು,  ಈಗಿನ ನಿಯಮಗಳ ಪ್ರಕಾರದ ಮಾರ್ಗಸೂಚಿಗಳು ಸರಿಯಿಲ್ಲ. ಇದರಿಂದ ಹಲವೆಡೆ ಜಿ.ಪಂ. ಕ್ಷೇತ್ರಗಳು ಹೆಚ್ಚಾಗುತ್ತವೆ. ತಾಲೂಕು ಪಂಚಾಯತ್ ಕ್ಷೇತ್ರಗಳು ಕಡಿಮೆಯಾಗುತ್ತವೆ. ಗೊಂದಲಗಳು ಹೆಚ್ಚಾಗುತ್ತವೆ. ಹಾಗಾಗಿ  ಮಾರ್ಗಸೂಚಿಗಳ ಪರಿಷ್ಕರಣೆ ಅಗತ್ಯವಿದೆ ಎಂದು ಮನವಿ ಮಾಡಿದರು.

ಈ ಬಗ್ಗೆ ಮಾ.31 ರ ಮೊದಲು ಸಭೆ ನಡೆಸಿ ಬಳಿಕ ಚುನಾವಣಾ ಆಯೋಗಕ್ಕೆ ಕ್ಷೇತ್ರ ವಿಂಗಡಣೆಯನ್ನು ವೈಜ್ಞಾನಿಕವಾಗಿ ನಡೆಸಿ ಪರಿಷ್ಕರಣೆ ಮಾಡಲು ತಿಳಿಸಲಾಗುವುದು. ಯಾವುದೇ ಕಾರಣಕ್ಕೂ ಜಿಪಂ ತಾಪಂ ಚುನಾವಣೆ ಮುಂದೂಡುವುದಿಲ್ಲ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಅವರು, ಅವೈಜ್ಞಾನಿಕ ಮಾರ್ಗಸೂಚಿಗಳ ಆಧಾರದ ಮೇಲೆ ವಿಂಗಡಣೆ  ಮಾಡುವುದರಿಂದ ಭವಿಷ್ಯದಲ್ಲಿ ಆಡಳಿತ ಮತ್ತು ಆಡಳಿತದ ಯಂತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯುವಂತೆ ಸರಕಾರಕ್ಕೆ ಸೂಚಿಸಿದರು. ಆದರೆ, ಸ್ಥಾನಗಳ ಮೀಸಲಾತಿ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಸರಕಾರಕ್ಕೆ ಮನವಿ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror