ಅ.31ರಂದು ಸಹಕಾರ ಸಂಘಗಳ ನಿರ್ದೇಶಕರಿಗೆ ಮತ್ತು ಕಾರ್ಯನಿರ್ವಹಣಾಧಿಕಾರಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

October 29, 2019
1:53 PM

ಸುಳ್ಯ: ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳಿ ಬೆಂಗಳೂರು ಹಾಗು ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಹಾಗು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಅ.31ರಂದು ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

Advertisement
Advertisement
Advertisement
Advertisement

ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ. ನಾರಾಯಣ ಗೌಡ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಅಧ್ಯಕ್ಷೆ ಕೆ.ಲಲಿತ, ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಕಾಶ್ ರಾವ್ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಉಪಾಧ್ಯಕ್ಷ ಡಾ.ಬಿ.ಡಿ.ಭೂಕಾಂತ, ನಿರ್ದೇಶಕರಾದ ಪಿ.ಕೆ.ಜಯಕೃಷ್ಣೇ ಗೌಡ, ಚಿತ್ತರಂಜನ್ ಬೋಳಾರ್, ಅಕಾಡಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ದ.ಕ.ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisement

ಕಾರ್ಯಾಗಾರದಲ್ಲಿ ಪತ್ತಿನ ಸಹಕಾರ ಸಂಘಗಳಿಗೆ ಸಂಬಂಧಿಸಿ ಆದಾಯ ತೆರಿಗೆ ಮತ್ತು ಸರಕು ಮತ್ತು ಸೇವಾ ತೆರಿಗೆ, ಇ-ಸ್ಟಾಂಪಿಂಗ್, ಸಹಕಾರ ಸಂಘದಲ್ಲಿ ಸಾಲ ವಸೂಲಾತಿ ಪ್ರಕ್ರಿಯೆ ಹಾಗು ಸಹಕಾರ ಸಂಘಗಳ ಚುನಾವಣಾ ನಿಯಮ ಕುರಿತು ತಜ್ಞರು ಉಪನ್ಯಾಸ ನೀಡಲಿದ್ದಾರೆ ಎಂದು ಕೆ.ಸಿ.ನಾರಾಣ ಗೌಡ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ವೆಂಕಟರಮಣ ಸೊಸೈಟಿಯ ಉಪಾಧ್ಯಕ್ಷ ಪಿ.ಎಸ್‌.ಗಂಗಾಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ‌.ಟಿ.ವಿಶ್ವನಾಥ್, ನಿರ್ದೇಶಕರಾದ ಪಿ.ಸಿ.ಜಯರಾಮ, ನಿತ್ಯಾನಂದ ಮುಂಡೋಡಿ, ಜಾಕೆ ಸದಾನಂದ, ಎ.ವಿ.ತೀರ್ಥರಾಮ, ಚಂದ್ರಾ ಕೋಲ್ಚಾರ್, ಕೆ.ಸಿ.ಸದಾನಂದ, ಲಕ್ಷ್ಮೀ ನಾರಾಯಣ ನಡ್ಕ, ಮೋಹನ್ ರಾಂ ಸುಳ್ಳಿ, ದಿನೇಶ್ ಮಡಪ್ಪಾಡಿ, ದಾಮೋದರ ಎನ್.ಎಸ್. ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ
ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ
January 31, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror