ನವದೆಹಲಿ: ವಿಶ್ವದ ಅತ್ಯಾಧುನಿಕ ಯುದ್ಧ ವಿಮಾನವಾದ ರಫೇಲ್ ಹೊಂದುವ ಭಾರತೀಯ ವಾಯುಪಡೆಯ ಕನಸು ಕೊನೆಗೂ ನನಸಾಗಿದೆ. 5 ಯುದ್ಧ ವಿಮಾನಗಳು ಬುಧವಾರ ಹರ್ಯಾಣದ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ಆರ್‌ಕೆಎಸ್ ಭದೌರಿಯ ಸೇರಿದಂತೆ ವಾಯುಸೇನೆಯ ಹಿರಿಯ ಅಧಿಕಾರಿಗಳು ವಾಯುನೆಲೆಯಲ್ಲಿ ಉಪಸ್ಥಿತರಿದ್ದರು.
ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ ನಿರ್ಮಿತ ರಫೆಲ್ ಯುದ್ಧವಿಮಾನವು ಭಾರತವನ್ನು ತಲುಪಿದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಐದು ರಫೇಲ್ ಯುದ್ಧ ವಿಮಾನಗಳು ಹರಿಯಾಣಕ್ಕೆ ತಲುಪಿವೆ. ಈ ಮೂಲಕ ಭಾರತೀಯ ಸೇನೆಯ ಇತಿಹಾಸದಲ್ಲೇ ಹೊಸ ಶಕೆ ಆರಂಭವಾಗಲಿದೆ ಎಂದು ರಾಜನಾಥ ಸಿಂಗ್ ಟ್ವೀಟ್ ಮಾಡಿದ್ದಾರೆ.
4 ವರ್ಷಗಳ ಹಿಂದೆ ಭಾರತ ಸರ್ಕಾರ 59000 ಕೋಟಿ ರು. ವೆಚ್ಚದಲ್ಲಿ 36 ರಫೇಲ್ ಖರೀದಿಗೆ ಒಪ್ಪಂದ ಮಾಡಿಕೊಂಡಿತ್ತು. ಈ ಪೈಕಿ ಮೊದಲ 5 ವಿಮಾನ ಇದೀಗ ಹಸ್ತಾಂತರವಾಗಿದೆ. ಉಳಿದ ಎಲ್ಲಾ ವಿಮಾನಗಳು 2021ರ ಅಂತ್ಯದೊಳಗೆ ಭಾರತಕ್ಕೆ ಬರಲಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel