ಅಕ್ರಮ ಲಾಟರಿ ದಂಧೆ : ನಾಲ್ವರ ಬಂಧನ

October 3, 2019
7:43 PM

ಮಡಿಕೇರಿ  : ವಿರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ಲಾಟರಿಯನ್ನು ಆಧಾರವಾಗಿಟ್ಟುಕೊಂಡು ಜೂಜಾಟದ ದಂಧೆ ನಡೆಸುತ್ತಿದ್ದ ಆರೋಪದಡಿ ನಾಲ್ವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ಕರ್ನಾಟಕ ರಾಜ್ಯದಲ್ಲಿ ಲಾಟರಿ ಮಾರಾಟ ನಿಷೇಧವಾಗಿದ್ದರೂ ಕಳೆದ ಕೆಲವು ತಿಂಗಳುಗಳಿಂದ ಪಟ್ಟಣದ ವಿವಿಧೆಡೆ ಕೇರಳ ರಾಜ್ಯದ ಲಾಟರಿ ಅಕ್ರಮವಾಗಿ ಮಾರಾಟವಾಗುತ್ತಿತ್ತು. ಸಾರ್ವಜನಿಕರ ದೂರನ್ನು ಆಧರಿಸಿ ಖಚಿತ ಮಾಹಿತಿಯನ್ವಯ ದಂಧೆ ನಡೆಯುತ್ತಿದ್ದ ಪ್ರದೇಶಗಳಿಗೆ ಏಕಕಾಲಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ವರ್ತಕರಾಗಿರುವ ಕೆ.ಎಂ.ರಶೀದ್, ವಿನೋದ್, ಸಂಶುದ್ದೀನ್ ಹಾಗೂ ಎಂ.ಎಂ.ಮೊಯ್ದು ಬಂಧಿತ ಆರೋಪಿಗಳು. ಕೇರಳ ರಾಜ್ಯದ ಟಿಕೆಟ್‍ನ ಕೊನೆಯ ಮೂರು ಅಂಕಿಗಳ ಫಲಿತಾಂಶದ ಆಧಾರದ ಮೇಲೆ ಜೂಜಾಟ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ 30,780 ರೂ. ನಗದು ವಶ ಪಡಿಸಿಕೊಂಡಿರುವ ಪೊಲೀಸರು ಪ್ರಮುಖ ಅರೋಪಿಯ ಪತ್ತೆಗಾಗಿ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಮಾರ್ಗದರ್ಶನದಲ್ಲಿ ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಜಯಕುಮಾರ್, ವೃತ್ತ ನಿರೀಕ್ಷಕ ಕ್ಯಾತೇಗೌಡ ಅವರುಗಳ ನಿರ್ದೇಶನದ ಮೇರೆಗೆ ಠಾಣಾಧಿಕಾರಿ ಮರಿಸ್ವಾಮಿ, ಎಎಸ್‍ಐ ಮಾದಯ್ಯ, ಸೋಮಯ್ಯ, ಮತ್ತು ಸಿಬ್ಬಂದಿಗಳಾದ ಸುನೀಲ್, ಮೋಹನ್, ಲೋಕೇಶ್, ಗಿರೀಶ್, ಮುನೀರ್, ಈರಪ್ಪ, ರಂಜನ್ ಕುಮಾರ್ ಮತ್ತು ಚಾಲಕ ಯೋಗೇಶ್ ಅವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |
March 14, 2025
6:51 AM
by: The Rural Mirror ಸುದ್ದಿಜಾಲ
ಸೈಬರ್ ಅಪರಾಧ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ
December 9, 2024
7:15 AM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಪ್ರಕರಣಗಳು | ಸಾರ್ವಜನಿಕರ ಜಾಗೃತಿಗಾಗಿ ಅರಿವು ಕಾರ್ಯಕ್ರಮ
November 15, 2024
10:56 PM
by: The Rural Mirror ಸುದ್ದಿಜಾಲ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group