ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಮಹಾಸಭೆ ; ಅಧ್ಯಕ್ಷರಾಗಿ ಕಿನಿಲ ಅಶೋಕ್

December 2, 2019
3:33 PM

ಪುತ್ತೂರು: ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ (ರಿ) ಪುತ್ತೂರು ಇದರ ನೂತನ ಅಧ್ಯಕ್ಷರಾಗಿ ಕೋಡಪದವಿನ ಕಿನಿಲ ಅಶೋಕ್, ಕಾರ್ಯದರ್ಶಿಯಾಗಿ  ಮಹೇಶ್ ಪುಚ್ಚಪ್ಪಾಡಿ ಮತ್ತು ಉಪಾಧ್ಯಕ್ಷರಾಗಿ ಕುಕ್ಕುಜಡ್ಕದ ಎಂ.ಜಿ.ಸತ್ಯನಾರಾಯಣ, ಕೆ.ವಿಶ್ವನಾಥ ರಾವ್ ಸುಳ್ಯ ಇವರು ಆಯ್ಕೆಯಾಗಿದ್ದಾರೆ.

ಕಿನಿಲ ಅಶೋಕ್

ಡಿ.30 ರಂದು ಪುತ್ತೂರು ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದ ‘ಚುಂಚಶ್ರೀ ಸಭಾಭವನ’ದಲ್ಲಿ ಜರುಗಿದ ಸಂಘದ ಮಹಾಸಭೆಯಲ್ಲಿ ಕಾರ್ಯಕಾರಿ ಸಮಿತಿ ರಚಿಸಿ ಪದಾಧಿಕಾರಿಗಳನ್ನು ಘೋಷಿಸಲಾಯಿತು. ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ಕಾರ್ಯದರ್ಶಿ ಕಿನಿಲ ಅಶೋಕ್ ವರದಿ, ಲೆಕ್ಕಪತ್ರಗಳನ್ನು ಮಂಡಿಸಿದರು. ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಉಪಾಧ್ಯಕ್ಷ ಶಂ.ನಾ.ಖಂಡಿಗೆ ಆಗಮಿಸಿ ಶುಭಕೋರಿದರು. ಕ್ಯಾಂಪ್ಕೋದ ಮಾಜಿ ಅಧ್ಯಕ್ಷ ಕೊಂಕೋಡಿ ಪದ್ಮನಾಭ, ಎ.ಆರ್.ಡಿ.ಎಫ್. ಕಾರ್ಯನಿರ್ವಹಣಾಧಿಕಾರಿ ಡಾ.ಕೇಶವ ಭಟ್ ಮೊದಲಾದವರು ಉಪಸ್ಥಿತರಿದ್ದರು.

“ಸಂಘಕ್ಕೆ ಯುವ ಕೃಷಿಕರು ಬರುವಂತಾಗಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ರೂಪುಗೊಂಡ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವನ್ನು ಹೊಸ ತಲೆಮಾರು ಇನ್ನಷ್ಟು ಸುದೃಢವಾಗಿ ಕಟ್ಟಿಬೆಳೆಸಬೇಕಾಗಿದೆ.” ಎಂದು ಮಂಚಿ ಶ್ರೀನಿವಾಸ ಆಚಾರ್ ಅಭಿಪ್ರಾಯಪಟ್ಟರು.

ಕಿನಿಲ ಅಶೋಕ ಸ್ವಾಗತಿಸಿದರು. ಹಿರಿಯ ಸದಸ್ಯ ವಿ.ಮ.ಭಟ್ ಅಡ್ಯನಡ್ಕ ಪ್ರಾರ್ಥಿಸಿದರು. ನೂತನ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror