ಕಾಣಿಯೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ಬ್ರಹಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ಎ 30ರಂದು ಬೆಳಿಗ್ಗೆ ಗಣಪತಿ ಹವನ, ಬಿಂಬ ಶುದ್ಧಿ, ಕಲಶ ಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದೀಪಾರಾಧನೆ, ರಾತ್ರಿ ರಂಗಪೂಜೆ, ಶ್ರೀ ದೇವರ ಬಲಿ ಉತ್ಸವ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ಶ್ರೀ ಉಳ್ಳಾಕುಲು ಮತ್ತು ರಕ್ತೇಶ್ವರಿ ದೈವಗಳ ನೇಮ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪದ್ಮಯ್ಯ ಗೌಡ ಕರಂದ್ಲಾಜೆ, ಅರ್ಚಕರಾದ ನಾಗರಾಜ ಭಾಗವತ, ದೇವಳದ ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯಕುಮಾರ್ ಅಗಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮೋನಪ್ಪ ಗೌಡ ಕುರೋಡಿ ಅಗಳಿ, ಸತೀಶ್ ಮಾರ್ಕಜೆ, ಹರೀಶ್ ಮುಂಡಾಳ, ಶೋಭಾ ಏನೆಕಲ್ಲು ಅಗಳಿ, ತಾರಾ ಬೆಳಂದೂರು, ಕೇಶವ ಜೇಡರಕೇರಿ, ಚಂಪಾ ಅಬೀರ ಸೇರಿದಂತೆ ಹಲವಾರು ಮಂದಿ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.