ಅಡಿಕೆ ಕಳ್ಳತನಕ್ಕೆ ಯತ್ನ: ಮನೆ ಮಾಲಕನ ಗುಂಡೇಟಿಗೆ ಸಾವು

August 30, 2019
10:21 AM

ಮಡಿಕೇರಿ: ಕೊಡಗು ಜಿಲ್ಲೆಯ ಕರಿಕೆಯಲ್ಲಿ ಮನೆ ಮಾಲಕರು ತಮ್ಮ ಮನೆಗೆ ಅಡಿಕೆ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕಳ್ಳ ಮೃತಪಟ್ಟಿದ್ದಾನೆ. ದೇವಂಗೋಡಿ ಗಣೇಶ್​ ಮೃತಪಟ್ಟವ. ಈತ ಈ ಹಿಂದೆ ಕೂಡ ಹಲವು ಮನೆ ಕಳ್ಳತನ ಮಾಡಿ ಸಿಕ್ಕಿಬಿದ್ದು, ಶಿಕ್ಷೆ ಅನುಭವಿಸಿದ್ದ. ಬಿಡುಗಡೆಯಾಗಿ ಬಂದ ನಂತರದಲ್ಲೂ ಈತ ಕಳ್ಳತನ ಮುಂದುವರಿಸಿದ್ದ ಎನ್ನಲಾಗಿದೆ.

ಮಂದೋಡಿ ಮೊಣ್ಣಪ್ಪ ಅವರ ಮನೆಯಲ್ಲಿದ್ದ ಅಡಿಕೆ ದಾಸ್ತಾನನ್ನು ಕದಿಯಲು ಗಣೇಶ್​ ಗುರುವಾರ ರಾತ್ರಿ ಮುಂದಾಗಿದ್ದ. ಸದ್ದು ಕೇಳಿ ಹೊರಬಂದ ಮಂಡೇಡಿ ಮೊಣ್ಣಪ್ಪ ಅವರ ಮನೆಯವರು ಗುಂಡಿನ ದಾಳಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಭಾಗಮಂಡಲ ಪೊಲೀಸರ ಭೇಟಿ ನೀಡಿದ್ದಾರೆ.  ಗಣೇಶ್ ಮೇಲೆ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿತ್ತು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror