ಅಡಿಕೆ ಖರೀದಿಸಿದ ಕ್ಯಾಂಪ್ಕೋ | ಎಲ್ಲಾ ಶಾಖೆಗಳಲ್ಲೂ ನಿಗದಿತ ಸಮಯದಲ್ಲಿ ಅಡಿಕೆ ಖರೀದಿ| ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ |

April 13, 2020
7:53 PM

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಖೆಗಳಲ್ಲಿ ಕ್ಯಾಂಪ್ಕೋ ಸೋಮವಾರ ಅಡಿಕೆ ಖರೀದಿ ನಡೆಸಿದೆ. ಎಲ್ಲಾ ಶಾಖೆಗಳಲ್ಲಿ ಟೋಕನ್ ವ್ಯವಸ್ಥೆಯಲ್ಲಿ ನಿಗದಿತ ಸಮಯದಲ್ಲಿ ಸದಸ್ಯ ಬೆಳೆಗಾರರಿಂದ  ಅಡಿಕೆ ಖರೀದಿ ನಡೆಸಲಾಗಿದೆ.  25 ಸಾವಿರ ರೂಪಾಯಿ ಮೌಲ್ಯದ ಅಡಿಕೆ ಖರೀದಿ ನಡೆಸಲಾಗಿದ್ದು ಹೊಸ ಅಡಿಕೆ 250  ರೂಪಾಯಿ ಹಾಗೂ ಹಳೆ ಅಡಿಕೆ 275 ರೂಪಾಯಿಯಲ್ಲಿ ಖರೀದಿ ಮಾಡಲಾಗಿದೆ.

ಅಡಿಕೆ ಮಾರಾಟ ಹಾಗೂ ಖರೀದಿಯೇ ಇಲ್ಲದ ಸಮಯದಲ್ಲಿ ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಿರುವ ಕ್ಯಾಂಪ್ಕೋ ಆಡಳಿತ ಮಂಡಳಿಗೆ ಬೆಳೆಗಾರರು ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಪುತ್ತೂರಿನಲ್ಲಿ ಅಡಿಕೆ ಮಾರಾಟ ಮಾಡಿರುವ ಅಡಿಕೆ ಬೆಳೆಗಾರ ಉದಯಶಂಕರ್, ಅಡಿಕೆಯನ್ನೇ ನಂಬಿರುವ ಅಡಿಕೆ ಬೆಳೆಗಾರರಿಗೆ ಇಂತಹ ಸಂದರ್ಭದಲ್ಲಿ  ಕ್ಯಾಂಪ್ಕೋ ಮಾಡಿರುವ ಪ್ರಯತ್ನ ಶ್ಲಾಘನೀಯ. ತುರ್ತು ಸಂದರ್ಭಕ್ಕೆ ಅಗತ್ಯವಾದ ಹಣ ಲಭ್ಯವಾಗಿದೆ. ಇದರಿಂದ ನೆಮ್ಮದಿಯಾಗಿದೆ ಎಂದು ಹೇಳಿದ್ದಾರೆ.

ಅಡಿಕೆ ಬೆಳೆಗಾರ ದೇವಣ್ಣ ಗೌಡ ಮಾತನಾಡಿ , ಈಗಿನ ಪರಿಸ್ಥಿತಿಯಲ್ಲಿ ಕ್ಯಾಂಪ್ಕೋ ಉತ್ತಮ ಧಾರಣೆ ನೀಡಿದೆ. ಇದು ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ ಹಾಗೂ ಧೈರ್ಯ ತರುತ್ತದೆ ಎಂದು  ಹೇಳುತ್ತಾರೆ.

ಅಡಿಕೆ ಖರೀದಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ  ಇನ್ನಷ್ಟು ಪ್ರಯತ್ನ ಹಾಗೂ ಯೋಜನೆಗಳ ಬಗ್ಗೆ ಪ್ರಯತ್ನ ಮಾಡಲಾಗುವುದು.  ಸಾಗಾಟದ ಬಗ್ಗೆಯೂ ಪ್ರಯತ್ನ ಮಾಡಲಾಗುವುದು  ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror