ಅಡಿಕೆ ನಳ್ಳಿ ಬೀಳುವ ಸಮಸ್ಯೆ | ಅಡಿಕೆ ತೋಟಗಳಿಗೆ ಸಿಪಿಸಿಆರ್ ಐ ವಿಜ್ಞಾನಿಗಳ ತಂಡ ಭೇಟಿ

July 5, 2020
9:41 AM
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕಾಸರಗೋಡು ಜಿಲ್ಲೆಯ ಅಡಿಕೆ ತೋಟಗಳಲ್ಲಿ  ಎಳೆ ಅಡಿಕೆ ಬೀಳುವುದು ಹಾಗೂ ಸಿಂಗಾರ  ಒಣಗುವ ಸಮಸ್ಯೆ  ಈ ಬಾರಿ ವಿಪರೀತವಾಗಿ ಕಂಡುಬಂದಿತ್ತು. ಕಳೆದ 2 ವರ್ಷಗಳಿಂದ  ಈ ಸಮಸ್ಯೆ ಇದೆ ಎಂದು ಅಡಿಕೆ ಬೆಳೆಗಾರರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ  ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ವಿಟ್ಲದ ಸಿಪಿಸಿಆರ್ ಐ ವಿಜ್ಞಾನಿಗಳ ಗಮನಕ್ಕೆ ತಂದು, ಈ ಬಗ್ಗೆ ಸೂಕ್ತವಾದ ಅಧ್ಯಯನ ಹಾಗೂ ಪರಿಹಾರ ಮಾರ್ಗ ಅಗತ್ಯವಾಗಿದೆ ಎಂದು ಅಡಿಕೆ ಬೆಳೆಗಾರರ ಪರವಾಗಿ ತಿಳಿಸಿತ್ತು.
ಇದಕ್ಕೆ  ಸ್ಪಂದಿಸಿದ ವಿಜ್ಞಾನಿಗಳ ತಂಡ ಸುಳ್ಯ, ಪುತ್ತೂರು, ಕಡಬ ಪ್ರದೇಶದ ಕೆಲವು ಅಡಿಕೆ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಿದ್ದಿರುವ ಅಡಿಕೆ ಸ್ಯಾಂಪಲ್ ಗಳ ಸಂಗ್ರಹಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. ವಿಜ್ಞಾನಿಗಳ ತಂಡದಲ್ಲಿ   ಸಸ್ಯ  ಸಂತಾನೋತ್ಪತ್ತಿ ವಿಜ್ಞಾನಿ ಡಾ. ಎನ್. ಆರ್. ನಾಗರಾಜ, ಕೃಷಿ ಕೀಟಶಾಸ್ತ್ರ   ವಿಜ್ಞಾನಿ ಡಾ. ಶಿವಾಜಿ ಹೌಸ್ರಾವ್ ಥೂಬ್,  ಸಸ್ಯ ರೋಗಶಾಸ್ತ್ರ  ವಿಜ್ಞಾನಿ  ಡಾ. ಆರ್. ಥವಾ ಪ್ರಕಾಶ ಪಾಂಡಿಯನ್ ಮತ್ತು ಹಿರಿಯ ತಾಂತ್ರಿಕ ಅಧಿಕಾರಿ ಸಂತೋಷ್ ಕುಮಾರ್ ಭಾಗವಹಿಸಿದ್ದರು. ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ, ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಮೊದಲಾದವರು ಜೊತೆಗಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror