ಅಡ್ಡಮತದಾನದ ಇಫೆಕ್ಟ್ : ಬಿಜೆಪಿಯ ಪಕ್ಷ-ಸಂಘಟನೆಯ ಜವಾಬ್ದಾರಿಯಿಂದ 5 ಮಂದಿ ಮುಕ್ತ

July 20, 2019
7:43 PM

ಸುಳ್ಯ:  ಬಿಜಿಪಿ ಮಂಡಲ ಸಮಿತಿ ಪತ್ರಿಕಾ ಪ್ರಕಟಣೆಯೊಂದನ್ನು ನೀಡಿದ್ದು ಇದರಲ್ಲಿ ಒಟ್ಟು 5 ಮಂದಿಯನ್ನು ಪಕ್ಷ ಹಾಗೂ ಸಂಘಟನೆಯ ಎಲ್ಲಾ ರೀತಿಯ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಸಂಘಟನೆಯ ಎಲ್ಲಾ ಕಾರ್ಯಕರ್ತರಿಗೆ ಈ ಮೂಲಕ ತಿಳಿಯಪಡಿಸಲಾಗಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಕಾರ್ಯದರ್ಶಿ ಸುಬೋದ್ ಮೇನಾಲ ಹಾಗೂ ಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

Advertisement

ಪತ್ರಿಕಾ ಪ್ರಕಟಣೆ ಹೀಗಿದೆ,

ಪಕ್ಷ ಹಾಗೂ ಸಂಘಟನೆಯ ಅಪೇಕ್ಷೆಯಂತೆ, ಸುಳ್ಯ ಮಂಡಲದ ವ್ಯಾಪ್ತಿಗೊಳಪಟ್ಟ ಪ್ರಾ.ಕೃ.ಪ.ಸ.ಸಂಘ ಅರಂತೋಡು ಇದರ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,  ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಎಂ.ಬಾಲಗೋಪಾಲ ಸೇರ್ಕಜೆ,  ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಶಿವಪ್ರಸಾದ್ ಯು.ಎಂ.,  ಉಬರಡ್ಕ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಹರೀಶ್ ರೈ ಉಬರಡ್ಕ, ಮರ್ಕಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರುಕ್ಮಯ್ಯ ಗೌಡ,  ನೆಲ್ಲೂರುಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿಷ್ಣು ಭಟ್,  ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ವೆಂಕಟ್ ದಂಬೆಕೋಡಿ,  ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸದಾಶಿವ ಮೂಕಮಲೆ,  ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ, ಕಳಂಜ-ಬಾಳಿಲ
ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಅಜಿತ್ ರಾವ್ ಕಿಲಂಗೋಡಿ, ಮುರುಳ್ಯ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಪ್ರಸನ್ನ ಎಣ್ಮೂರು, ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಸಂತೋಷ್ ಜಾಕೆ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಸತೀಶ್ ಕೆಮನಬಳ್ಳಿ ಮತ್ತು ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿಯವರು ತಮ್ಮ ಸಹಕಾರಿ ಜವಾಬ್ದಾರಿಗೆ ರಾಜೀನಾಮೆ ನೀಡಿರುವುದಾಗಿ ಪಕ್ಷದ ಪ್ರಮುಖರಿಗೆ ಹಾಗೂ ಕಚೇರಿಗೆ ಮಾಹಿತಿ ನೀಡಿರುತ್ತಾರೆ.

ಆಲೆಟ್ಟಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಕೃಪಾಶಂಕರ ತುದಿಯಡ್ಕ ಹಾಗೂ ಬಿಳಿನೆಲೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಬಾಲಕೃ ಷ್ಣ  ಗೌಡ ವಾಲ್ತಾಜೆ ಇವರು ಯಾವುದೇ ರೀತಿಯಲ್ಲಿ ಸ್ಪಂದಿಸದ ಕಾರಣ, ಇವರನ್ನು ಪಕ್ಷ-ಸಂಘಟನೆಯ ಎಲ್ಲಾ ರೀತಿಯ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಸಂಘಟನೆಯ ಎಲ್ಲಾ ಕಾರ್ಯಕರ್ತರಿಗೆ ಈ ಮೂಲಕ ತಿಳಿಯಪಡಿಸಲಾಗಿದೆ.

ಇದಲ್ಲದೆ ಪಕ್ಷದ ಹಾಗೂ ಸಂಘಟನೆಯ ಅಪೇಕ್ಷೆಯನ್ನು ಮತ್ತು ತೀರ್ಮಾನವನ್ನು ಉಲ್ಲಂಘಿಸಿ ನಡೆದುಕೊಂಡ ಸುಳ್ಯ ಸಿ.ಎ. ಬ್ಯಾಂಕ್ ಮಾಜಿ ನಿರ್ದೇಶಕ ಕರುಣಾಕರ ಎ.ಎಸ್. ಅಡ್ಪಂಗಾಯ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷರಾದ  ಗೀತಾ ಗೋಪಿನಾಥ ಬೊಳುಬೈಲು ಹಾಗೂ ಬೆಳ್ಳಾರೆ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾದ ಕೆ. ಕೂಸಪ್ಪ ನಾಯ್ಕ ಕೊಡಿಯಾಲ ಇವರನ್ನು ಕೂಡಾ ಸಂಘಟನೆಯ ವಿವಿಧ ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗಿದೆ.

Advertisement

ಎಂದು ಪ್ರಕಟಣೆ ತಿಳಿಸಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ
July 4, 2025
9:22 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |
July 4, 2025
8:27 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group