ಅಡ್ಡಮತದಾನ ಪ್ರಕರಣ : ಪಕ್ಷದ ಸೂಚನೆ ಮೇರೆಗೆ ನೀಡಿದ್ದ ರಾಜೀನಾಮೆ ವಾಪಾಸ್…!

May 20, 2019
10:16 PM

ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯ ಅಡ್ಡಮತದಾನ ಪ್ರಕರಣದಲ್ಲಿ ಬಿಜೆಪಿ ಹಾಗೂ ಸಂಫಪರಿವಾರ ಹಾಗೂ ಸಹಕಾರ ಭಾರತಿಯು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಭಾಗಹಿಸಿದ್ದ ಎಲ್ಲಾ 17 ಮಂದಿಯೂ ರಾಜೀನಾಮೆ ನೀಡಬೇಕೆಂದು ಸೂಚನೆ ನೀಡಿತ್ತು.

ಈ ಸೂಚನೆಯ  ಹಿನ್ನೆಲೆಯಲ್ಲಿ  ರಾಜೀನಾಮೆ ನೀಡಿದ್ದ  ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನಿರ್ದೇಶಕ ಪ್ರಸನ್ನ ಕೆ ಎಣ್ಮೂರು ಕ್ರಮಬದ್ದವಾಗಿ ನಿರ್ದೇಶಕ ಸ್ಥಾನಕ್ಕೆ  ರಾಜೀನಾಮೆ ನೀಡಿ ಸಹಕಾರ ಭಾರತಿಗೂ ರಾಜೀನಾಮೆ ನೀಡಿದ್ದರು. ಆದರೆ 10 ದಿನ ಕಳೆದರೂ ಪಕ್ಷದ ಕಡೆಯಿಂದ ಹಾಗೂ ಸಂಘಪರಿವಾರದ ಕಡೆಯಿಂದ ಯಾವುದೇ ಸೂಚನೆ ಹಾಗೂ ಇತರ ಯಾರೂ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಸೋಮವಾರ ತಮ್ಮ ರಾಜೀನಾಮೆಯನ್ನು ಸ್ವ ಇಚ್ಛೆಯಿಂದ ವಾಪಾಸ್ ಪಡೆಯುವುದಾಗಿ  ಕಾರ್ಯನಿರ್ವಹಣಾಧಿಕಾರಿಯವರಿಗೆ ಪತ್ರ ನೀಡಿದ್ದಾರೆ.

ಪಕ್ಷ ಹಾಗೂ ಸಂಘಪರಿವಾರ ನೀಡಿದ ಸೂಚನೆಯನ್ನು  ಯಾರೂ ಪಾಲನೆ ಮಾಡದೇ ಇರುವುದರಿಂದ ತಾನು ಕೂಡಾ  ರಾಜೀನಾಮೆ ವಾಪಾಸ್ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!
June 21, 2026
12:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror