ಸುಳ್ಯ: ಪ್ರಮುಖ ಇಲಾಖೆಗಳ ಅಧಿಕಾರಿಗಳು ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಗೈರು ಹಾಜರಾಗಿರುವುದು ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು.
ಕೊರೋನಾ ಭೀತಿ, ಲಾಕ್ ಡೌನ್ ಹಿನ್ನಲೆಯಲ್ಲಿ ನಾಲ್ಕೂವರೆ ತಿಂಗಳ ಬಳಿಕ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಹಲವು ಮಂದಿ ಪ್ರಮುಖ ಅಧಿಕಾರಿಗಳು ಸಭೆಗೆ ಹಾಜರಾಗಿರಲಿಲ್ಲ. ಬದಲಿಯಾಗಿ ಬಂದ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ಇರಲಿಲ್ಲ. ಇದಕ್ಕೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಸರಿಯಾದ ಮಾಹಿತಿ ಇಲ್ಲದೆ ಸಭೆಗೆ ಬರುವುದು ಯಾಕೆ ಎಂದು ಅಧ್ಯಕ್ಷರು ಸದಸ್ಯರನ್ನು ತರಾಟೆಗೆತ್ತಿಕೊಂಡರು. ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel