ಅಯ್ಯನಕಟ್ಟೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

December 15, 2019
7:15 AM

ಬೆಳ್ಳಾರೆ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನ ಮೂರು ಕಲ್ಕಡ್ಕ ಇದರ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜ. 25 ರಿಂದ 27 ರವರೆಗೆ ಹಾಗೂ ಅಯ್ಯನಕಟ್ಟೆ ಜಾತ್ರೆ ಜ. 27 ರಿಂದ ಜ. 30 ರ ತನಕ ನಡೆಯಲಿದ್ದು, ಈ ಬಗ್ಗೆ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಡಿ. 14 ರಂದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಸಭಾ ಭವನದಲ್ಲಿ ನಡೆಯಿತು.

ಬೆಳ್ಳಾರೆ ಕ್ಷೇತ್ರದ ಜಿ.ಪಂ. ಸದಸ್ಯ ಎಸ್.ಎನ್. ಮನ್ಮಥ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಜೀರ್ಣೋದ್ಧಾರ, ಬ್ರಹ್ಮ ಕಲಶೋತ್ಸವ ಮತ್ತು ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಎ.ಎಂ.‌ ಸುಧಾಕರ ರೈ ಆಮಂತ್ರಣ ಪತ್ರಿಕೆ ವಿತರಿಸುವ ಬಗ್ಗೆ ಹಾಗೂ ಸ್ಮರಣ ಸಂಚಿಕೆಯ ಬಗ್ಗೆ ಮಾಹಿತಿ ನೀಡಿದರು.

ಆಡಳಿತ ಸಮಿತಿ ಅಧ್ಯಕ್ಷ ಲಕ್ಷಣ ಗೌಡ ಬೇರಿಕೆ, ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್. ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಕಾರ್ಯಾಧ್ಯಕ್ಷ ಕೂಸಪ್ಪ ಗೌಡ ಮುಗುಪು, ಸಂಚಾಲಕರಾದ ಟಿ. ಲಿಂಗಪ್ಪ ಗೌಡ, ಬಿ. ರಾಮಚಂದ್ರ ರಾವ್, ಎಂ. ಸುಬ್ರಹ್ಮಣ್ಯ ಮುಂಡುಗಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror